ರಾಷ್ಟ್ರಕವಿ ಕುವೆಂಪುರವರ ಜನ್ಮದಿನ ಆಚರಣೆ

Must Read

ಸವದತ್ತಿ: ಸವದತ್ತಿ ಯ ಶಾಂತಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನ ಆಚರಿಸಲಾಯಿತು. ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಶಿಕ್ಷಕರಾದ ತಮ್ಮನಗೌಡ ಏಗನಗೌಡ್ರ ” ಕುವೆಂಪುರವರು ವಿಶ್ವದ ಜನತೆಗೆ ತಮ್ಮ ಸಾಹಿತ್ಯದ ಮೂಲಕ ವಿಶ್ವಮಾನವ ಸಂದೇಶ ಸಾರಿದ್ದಾರೆ. ಮನುಜಮತ ವಿಶ್ವಪಥ ಎಂಬ ಸಾಲುಗಳ ಮೂಲಕ ಸರ್ವಧರ್ಮ ಸಮನ್ವಯತೆಯಿಂದ ಬದುಕಲು ತಿಳಿಸಿದ್ದಾರೆ. ಅವರೆಂದಿಗೂ ಅಜರಾಮರ”ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ನೀಲಮ್ಮ ಚಂದಾಪುರ, ಪಾರ್ವತಿ ಪಚ್ಚೇದ, ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ಹಾಜರಿದ್ದರು. ಮಕ್ಕಳಿಗೆ ಸಿಹಿ ನೀಡಲಾಯಿತು.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group