ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

Must Read

ಗೋಕಾಕ– ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ ಧ್ವನಿ ಕೋಗಿಲೆ ಯ ಸ್ವರೂಪವನ್ನು ಹೊಂದಿದ್ದರಿಂದ ಇವರನ್ನು ‘ಭಾರತದ ನೈಟಿಂಗೇಲ್’ ಎಂದು ಕರೆಯುತ್ತಿದ್ದರು. ಲತಾಜೀ ಅವರ ಕಂಠಸಿರಿಯಲ್ಲಿ ಮೂಡಿಬಂದ ‘ಎ ಮೇರಿ ವತನ ಕೀ ಲೋಗೋ’ ಭಾರತೀಯ ಚಿತ್ರರಂಗದಲ್ಲಿಯೇ ಎಂದೂ, ಯಾರೂ ಮರೆಯದ ಅತ್ಯಂತ ಜನಪ್ರಿಯ ಹಾಡು ಆಗಿದೆ, ಆಗಿನ‌ ಪ್ರಧಾನಿಯಾಗಿದ್ದ ಪಂ. ನೆಹರೂ ಅವರು ಈ ಹಾಡು ಕೇಳಿ ಕಣ್ಣೀರು ಸುರಿಸಿದ್ದರು. ಸೂರ್ಯ- ಚಂದ್ರ ಇರುವವರೆಗೆ ಇದು ಅಜರಾಮರ ಎಂದು ಅವರು ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

ಲತಾ ಮಂಗೇಶ್ಕರ್ ಅವರಿಗೆ ಭಾರತದ ಅತ್ಯುನ್ನತ ಭಾರತ ರತ್ನ‌ ಪ್ರಶಸ್ತಿ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇವರ ನಿಧನದಿಂದ ದೇಶದ ಅತ್ಯಮೂಲ್ಯ ರತ್ನವೊಂದನ್ನು ಕಳೆದುಕೊಂಡು ಇಡೀ ಭಾರತವು ಬಡವಾಗಿದೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಾರ್ಥಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group