ಫೆ.13 ರಂದು ಜಾನಪದ ಸಂಗೀತ ಉತ್ಸವ – ಕೂಚಬಾಳ

Must Read

ಸಿಂದಗಿ: ತಾಲೂಕಿನ ಯರಗಲ್ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ವಿಜಯಪುರ ಇವುಗಳ ಸಹಯೋಗದಲ್ಲಿ ಫೇ 13 ರಂದು ಸಾಯಂಕಾಲ 7 ಗಂಟೆಗೆ ಜಾನಪದ ಸಂಗೀತ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ರಾಜಶೇಖರ ಕೂಚಬಾಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಸಾಯಂಕಾಲ ನಡೆಯುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ನೆಲೋಗಿ ವಿರಕ್ತ ಮಠದ ಪೂಜ್ಯಶ್ರೀ ಜಗದ್ಗುರು ಸಿದ್ದಲಿಂಗ ಸ್ವಾಮಿಗಳು, ಸಾನ್ನಿಧ್ಯವನ್ನು ಯರಗಲ್ ಬಿ.ಕೆ ಅರೂಢಮಠದ ಪೂಜ್ಯಶ್ರೀ ಅದ್ವೈತಾನಂದ ಅಪ್ಪಾಜಿ, ಶಂಕರಾನಂದಮಠದ ಪೂಜ್ಯಶ್ರೀ ರಾಜಪ್ಪಯ್ಯ ಸ್ವಾಮಿಗಳು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಕಸಾಪ ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಮಾಜಿ ಜಿಪಂ ಸದಸ್ಯ ಮಹಾಂತಗೌಡ ಪಾಟೀಲ, ಗುರಲಿಂಗಪ್ಪಗೌಡ ಪಾಟೀಲ, ಹುಸೇನಸಾಬ ನದಾಫ್, ಶಂಕ್ರೆಪ್ಪ ಹಂಗರಗಿ, ಮಡಿವಾಳಪ್ಪ ಕಡಲಗೊಂಡ ಸೇರಿದಂತೆ ಕಸಾಪ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಮತ್ತು ಗ್ರಾಮದ ಗಣ್ಯರು ಆಗಮಿಸಲಿದ್ದಾರೆ ಕಾರಣ ಸುತ್ತಮುತ್ತಲಿನ ಗ್ರಾಮಸ್ಥರು, ಕಲಾಭಿಮಾನಿಗಳು, ಸಂಗೀತ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕು ಎಂದು ಗೌರವ ಕಾರ್ಯದರ್ಶಿ ಶಿವಕುಮಾರ ಕಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group