ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

Must Read

ಮೂಡಲಗಿ: ಸಚಿವ ಕೆ ಎಸ್ ಈಶ್ವರಪ್ಪನವರು ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ಜಜ ಹಾರಿಸುವ ಕುರಿತು ನೀಡಿದ ಹೇಳಿಕೆಯನ್ನು ಖಂಡಿಸಿ, ಸಚಿವ ಸ್ಥಾನದಿಂದ ಈಶ್ವರಪ್ಪನವರನ್ನು ವಜಾ ಮಾಡಿ, ದೇಶದ್ರೋಹ ಕಾಯ್ದೆಯಡಿಯಲ್ಲಿ ದೂರು ದಾಖಲಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಪಕ್ಷದ ಅರಭಾವಿ ಹಾಗೂ ಕೌಜಲಗಿ ಬ್ಲಾಕ್ ಕಮಿಟಿ ವತಿಯಿಂದ ಮೂಡಲಗಿ ಪಟ್ಟಣದಲ್ಲಿ ಸೋಮವಾರ ಮುಂಜಾನೆ 10 ಗಂಟೆಗೆ ಮೂಡಲಗಿ ಕಲ್ಮೇಶ್ವರ ವೃತ್ತದಿಂದ ತಹಶೀಲ್ದಾರರ ಕಛೇರಿ ವರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮೂಡಲಗಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಕಲ್ಲಪ್ಪಗೌಡ ಲಕ್ಕಾರ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಪಕ್ಷದ ಸರ್ವ ಮುಖಂಡರು ಹಾಗೂ, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸ ಬೇಕೆಂದು ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಅಧ್ಯಕ್ಷರಾದ ಗುರುರಾಜ ಪೂಜೇರಿ, ಲಗಮನ್ನ ಕಳಸನ್ನವರ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group