ಡಿಕೆಶಿ ಪ್ರಚೋದನೆಯಿಂದ ಯುವಕನ ಕೊಲೆ – ಈಶ್ವರಪ್ಪ

Must Read

ಶಿವಮೊಗ್ಗ – ಇಲ್ಲಿಯವರೆಗೆ ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರ ಪ್ರಚೋದನಕಾರಿ ಹೇಳಿಕೆಗಳಿಂದಾಗಿ ಈಗ ಗೂಂಡಾಗಳು ಬಾಲ ಬಿಚ್ಚಿದ್ದಾರೆ. ನಾವು ಅವರನ್ನು ಹತ್ತಿಕ್ಕುತ್ತೇವೆ, ಬಿಡುವುದಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಯುವಕನೊಬ್ಬನ ಬರ್ಬರ ಹತ್ಯೆಯ ಹಿನ್ನೆಲೆಯಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಿದ್ದ ಅವರು, ಪ್ರಾಮಾಣಿಕ ಯುವಕ ನಮ್ಮ ಕಾರ್ಯಕರ್ತನನ್ನು ಮುಸ್ಲಿಂ ಗೂಂಡಾಗಳು ಹತ್ಯೆಗೈದಿದ್ದಾರೆ. ಹಿಜಾಬ್ ಗಲಾಟೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂಬುದಾಗಿ ಡಿಕೆ ಶಿವಕುಮಾರ ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದರಿಂದ ಈ ಹತ್ಯೆ ನಡೆದಿದೆ ಎಂದು ಆರೋಪಿಸಿದರು.

ನಮ್ಮ ಸರ್ಕಾರದಿಂದ ಈ ಬಗ್ಗೆ ತನಿಖೆ ನಡೆಸುತ್ತೇವೆ. ಅವರು ಶಿವಮೊಗ್ಗದವರೋ ಅಥವಾ ಹೊರಗಿನವರೋ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ನಾವು ಅವರನ್ನು ಬಿಡುವುದಿಲ್ಲ, ಮಟ್ಟ ಹಾಕುತ್ತೇವೆ ಎಂದು ಈಶ್ವರಪ್ಪ ಹೇಳಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group