ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅರಭಾವಿ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

Must Read

ಮೂಡಲಗಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅರಭಾವಿ ಮತ್ತು ಕೌಜಲಗಿ ಕಾಂಗ್ರೆಸ್ ಬ್ಲಾಕ್ ಕಮಿಟಿಯಿಂದ ಸೋಮವಾರ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ವೇಳೆಯಲ್ಲಿ ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ದೇಶದಲ್ಲಿ ರಾಷ್ಟ್ರ ಧ್ವಜವನ್ನು ತಾಯಿಗೆ ಸಮಾನವಾಗಿ ಗೌರವಿಸಲಾಗುತ್ತಿದೆ. ಹರುಕು ಬಾಯಿ ಸಚಿವ ಈಶ್ವರಪ್ಪ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿರುವ ಹಿನ್ನೆಲೆ ಈಶ್ವರಪ್ಪ ವಿರುದ್ದ ಪೊಲೀಸರು ದೇಶದ್ರೋಹ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಳ್ಳಬೇಕು. ಸಚಿವರಾಗಿ ಹೀಗೆ ಮಾತನಾಡಿರುವುದು ಸರಿಯಲ್ಲ ಸಂವಿಧಾನ ಬಾಹಿರ ಹೇಳಿಕೆ ನೀಡಿರುವ ಈಶ್ವರಪ್ಪ ಅವರಿಂದ ತಕ್ಷಣ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಸಿದರು.

ಬಿ.ಬಿ.ಬೆಳಕೂಡ ಮಾತನಾಡಿ, ಇವತ್ತೇ ಈಶ್ವರಪ್ಪ ಅವರನ್ನು ವಜಾಮಾಡಿ. ಜನರ ತೆರಿಗೆಯಲ್ಲಿ ಕೋಟ್ಯಂತರ ರೂಪಾಯಿ ಖರ್ಚುಮಾಡಿ ರಾಜ್ಯದ ಜನರ ಹಿತ ಕಾಪಾಡುವ ಬಗ್ಗೆ ಕಲಾಪದಲ್ಲಿ ಅನೇಕ ಚರ್ಚೆ ನಡೆಸಬೇಕಾಗಿದೆ, ಆದರೆ ಒಬ್ಬರಿಗೋಸ್ಕರ ಕಲಾಪದಲ್ಲಿ ಚರ್ಚೆಯಾಗದಿರುವ ವಿಷಾದಕರ ಸಂಗತಿ, ರಾಷ್ಟ್ರಕ್ಕೆ ಅಪಮಾನ ಮಾಡಿರುವ ಈಶ್ವರಪ್ಪಗೆ ಬಿಜೆಪಿ ಸರಕಾರ ಬೆಂಬಲಕ್ಕೆ ನಿಂತಿರುವುದು ಖಂಡನೀಯ ಎಂದರು.

ಬಿ.ಬಿ.ಹಂದಿಗುಂದ ಮಾತನಾಡಿ, ನಮ್ಮ ದೇಶಕ್ಕೆ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ರೀತಿಯಲ್ಲಿ ಮಾತುಗಳನ್ನಾಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೋಮುಸೌದಾರ್ಹತೆ ಕದಡುವ ರೀತಿಯಲ್ಲಿ ಮಾತನಾಡಿದ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದರು.

ಕಾಂಗ್ರೆಸ್ ಮುಖಂಡರಾದ ಎಸ್.ಆರ್.ಸೋನವಾಲ್ಕರ, ಸಿದ್ದಪ್ಪ ಮುಂಡಗಿನಾಳ, ಮಂಜು ಮಸಗುಪ್ಪಿ, ಅರಭಾವಿ ಬ್ಲಾಕ್ ಅಧ್ಯಕ್ಷ ಗುರುರಾಜ ಪೂಜೇರಿ ಮಾತನಾಡಿ, ಈಶ್ವರಪ್ಪ ಅವರು ರಾಜೀನಾಮೆ ಕೊಡುವವರೆಗೂ ಕಾಂಗ್ರೆಸ್ ಕಾರ್ಯಕರ್ತರ ಈ ಹೋರಾಟ ಹೀಗೆ ಮುಂದುವರೆಯುತ್ತದೆ. ಶೀಘ್ರವಾಗಿ ಈಶ್ವರಪ್ಪ ಅವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಿ, ರಾಜ್ಯದ ಜನತೆಯ ಕುಂದುಕೊರತೆಗಳ ಬಗ್ಗೆ ಸುಗಮ ಕಲಾಪ ನಡೆಸಲು ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಲು ಮುಂದಾಗಬೇಕೆಂದರು.

ಈ ಪ್ರತಿಭಟನೆಯಲ್ಲಿ ಅರಭಾವಿ ಬ್ಲಾಕ್ ಅಧ್ಯಕ್ಷ ಗುರುರಾಜ ಪೂಜೇರಿ, ಕೌಜಲಗಿ ಬ್ಲಾಕ್ ಅಧ್ಯಕ್ಷ ಲಗಮನ್ನ ಕಳಸನ್ನವರ, ಮಹಿಳಾ ಬ್ಲಾಕ್ ಅಧ್ಯಕ್ಷೆ ಸುಜಾತಾ ಹಿರೇಮಠ, ಮಾರುತಿ ಮಾವರಕರ, ಶ್ರೀಕಾಂತ ದೇವರಮನಿ, ಶ್ರೀನಾಥ ಕರಿಹೊಳಿ, ಕುಮಾರ ಕಾತರಕಿ, ಶ್ರೀಕಾಂತ ಕರಿಗಾರ, ಸುನೀಲ ಯತ್ತಿನಮನಿ, ನಾಗೇಂದ್ರ ಕಬ್ಬೂರ, ಭೀಮಶಿ ದೊಡ್ಡಮನಿ ಹಾಗೂ ಅನೇಕ ಕಾರ್ಯಕರ್ತರು ಇದ್ದರು.

ಅರಭಾವಿ ಮತ್ತು ಕೌಲಜಗಿ ಕಾಂಗ್ರೆಸ್ ಬ್ಲಾಕ್ ಕಮಿಟಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group