ಅಖಿಲ ಕರ್ನಾಟಕ ಮಾಧ್ವ ಮಹಾಸಭಾಕ್ಕೆ ನೂತನ ಕಾರ್ಯಕಾರಿಣಿ

Must Read

ಬೆಂಗಳೂರು – ಮೂರು ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾದ ಗೌರವ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ ಹಾಗು ಪ್ರಧಾನ ಕಾರ್ಯದರ್ಶಿಯಾಗಿ ದಾಸ ಸಾಹಿತ್ಯ ಸಂಘಟಕ ಡಾ.ವಾದಿರಾಜ ತಾಯಲೂರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಕುರಿತು ಮಹಾ ಪೋಷಕರಾದ ಹಿರಿಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ,  ಮಹಾಸಭೆಯ ಅಧ್ಯಕ್ಷ ಡಾ.ಮುರಳಿಧರ, ಖಜಾಂಚಿ ಡಾ.ಕೆ.ವಿ.ರಾಮಚಂದ್ರ ಹಾಗು ಮಹಿಳಾ ವಿಭಾಗದ ಅಧ್ಯಕ್ಷೆ ಮಾಲಿನಿ ರವರ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಮುದಾಯದ ಸಂಘಟನೆ , ಅವಕಾಶ ವಂಚಿತ ಸಮಾಜ ಬಾಂಧವರಿಗೆ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಸಂಸ್ಕೃತಿ ರಕ್ಷಣೆಯ ಕಾರ್ಯವನ್ನು ಮಾಡುವ ಉದ್ದೇಶವಿದೆ ಎಂದು ಸಭಾದ ಪದಾಧಿಕಾರಿಗಳು ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group