ವಿದ್ಯಾರ್ಥಿಗಳು ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಬೇಕು – ಪಿ.ಎಸ್.ಐ. ಶಾಂತಾ ಹಳ್ಳಿ

Must Read

ಮೂಡಲಗಿ: ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವದರ ಜೊತೆಗೆ ಸ್ವಾವಲಂಬಿಗಳಾಗಿ ಬದುಕಬೇಕೆಂದು ಘಟಪ್ರಭಾ ಪಿ.ಎಸ್.ಐ. ಶಾಂತಾ ಹಳ್ಳಿ ಹೇಳಿದರು.

ಅವರು ಮೂಡಲಗಿ ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲಿ ಕಾನುನುಗಳನ್ನು ತಿಳಿದುಕೊಂಡು ಬಾಲ್ಯ ವಿವಾಹದಂತಹ ಪದ್ಧತಿಗಳಿಗೆ ಕಡಿವಾಣ ಹಾಕಿ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಹೇಳಿದರು. ಚಿಕ್ಕವರಿದ್ದಾಗ ಯಾವುದೇ ಆಕರ್ಷಣೆಗೆ ಒಳಗಾಗದೇ ಓದುವ ಹವ್ಯಾಸ ಬೆಳೆಸಿಕೊಂಡು ಜ್ಞಾನಾರ್ಜನೆ ಹೆಚ್ಚಿಸಿ ಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲ ಮಹಿಳಾ ಶಿಕ್ಷಕರನ್ನು ಹಾಗೂ ಅಕ್ಷರದಾಸೋಹ ಸಿಬ್ಬಂದಿಯನ್ನು ಉಡಿ ತುಂಬಿ ಗೌರವಿಸಲಾಯಿತು ಹಾಗೂ ಘಟಪ್ರಭಾ ಪಿ.ಎಸ್.ಐ. ಶಾಂತಾ ಹಳ್ಳಿಯವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ವ್ಹಿ.ಗಿರೆಣ್ಣವರ ಪ್ರ‍್ರಧಾನಗುರುಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ, ಪುಷ್ಪಾ ಭರಮದೆ, ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ್ಲ, ಶೀಲಾ ಕುಲಕರ್ಣಿ, ಸಂಗೀತಾ ತಳವಾರ. ಶಂಕರ ಲಮಾಣಿ, ಕಿರಣ ಭಜಂತ್ರಿ, ಮಹಾದೇವ ಗೋಮಾಡಿ, ಮಂಜುನಾಥ ಕಮ್ಮಾರ ಉಪಸ್ಥಿತರಿದ್ದರು. ಶಿಕ್ಷಕ ಮಹಾದೇವ ಗೋಮಾಡಿ ನಿರೂಪಿಸಿ ವಂದಿಸಿದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group