ಇಂದು ಹೋಳಿ ಹುಣ್ಣಿಮೆ: ಹೋಳಿ ಹಬ್ಬದ ಪೌರಾಣಿಕ ಮಹತ್ವ ತಿಳಿಯೋಣ

Must Read

ಪೂರ್ವಕಾಲದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ, ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿ , ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂದು ಬ್ರಹ್ಮನಲ್ಲಿ ವರವನ್ನು ಪಡೆದಿದ್ದ.

ಭೋಗಸಮಾಧಿಯಲ್ಲಿದ್ದ ಶಿವನು ತನ್ನ ಪತ್ನಿಯಾದ ಪಾರ್ವತಿಯೊಂದಿಗೆ ಆ ವೇಳೆಯಲ್ಲಿ ಸಮಾಗಮ ಹೊಂದಲು ಸಾಧ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಮನ್ಮಥ { ಕಾಮ } ನಲ್ಲಿ ಬೇಡಿದರು.

ಕಾಮ ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದರು. ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು.
ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿನಿಂದ ( ತ್ರಿನೇತ್ರ ) ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದುಃಖದಿಂದ ಶಿವನ ಹತ್ತಿರ ಪತಿಭಿಕ್ಷೆ ಬೇಡಿದಳು. ಆಗ ಶಾಂತಗೊಂಡ ಶಿವನು ಕಾಮನಿಗೆ ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ವರ ಕೊಟ್ಟನು.

ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾಗುತ್ತಾನೆ.ಈ ಘಟನೆ ನಡೆದದ್ದು ಪಾಲ್ಗುಣ ಶುದ್ದ ಹುಣ್ಣಿಮೆಯಂದು.
ಆದ್ದರಿಂದ ಈ ದಿನವನ್ನು ಕಾಮನ ಹುಣ್ಣಿಮೆಯಾಗಿ ಆಚರಿಸಲಾಗುತ್ತಿದೆ.

ಈ ದಿನದಂದು ಅಕ್ಕಿಹಿಟ್ಟು ಮತ್ತು ಅರಿಶಿನ ಬೆರೆಸಿದ ಗುಲಾಲು ತಯಾರಿಸಿ , ಬಿದರಿನಿಂದ ಪಿಚಕಾರಿ ತಯಾರಿಸಿ ಬಣ್ಣದಾಟ ಆಡುತ್ತಾರೆ.
ರಂಗಿನಾಟದ ನಂತರ ಅಭ್ಯಂಜನ ಸ್ನಾನ ಮಾಡಿ ದೇವರಲ್ಲಿ ಕೆಟ್ಟ ಗುಣಗಳೆಲ್ಲಾ ಸುಟ್ಟು ಹೋಗಲಿ ಅಂತ ಪ್ರಾರ್ಥಿಸಿ ವಿಶೇಷ ಸಿಹಿ ಅಡುಗೆ ಮಾಡಿ ನೈವೇದ್ಯ ಹಿಡಿದು ಊಟ ಮಾಡುತ್ತಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಈ ದಿನ ಊರಿನವರ ಮನೆಯಲ್ಲಿ ಸಿಗುವ ಬೇಡದ ವಸ್ತುಗಳನ್ನೆಲ್ಲಾ ತಂದು ಒಂದೆಡೆ ಗುಡ್ಡೆ ಮಾಡಿ, ರಾತ್ರಿ ಹುಡುಗನೊಬ್ಬನಿಗೆ ಶಿಖಂಡಿಯ ವೇಷ ಹಾಕಿಸಿ , ಅವನಿಂದ ಊರಿನ ಐದು ಮನೆಗಳಲ್ಲಿ ಭಿಕ್ಷೆ ಬೇಡಿಸಿ ಕರೆತಂದು ಅವನಿಂದ ಬೇಡದ ವಸ್ತುಗಳ ಗುಡ್ಡೆಗೆ ಬೆಂಕಿ ಇಡಿಸುತ್ತಾರೆ……ಇದೇ ಕಾಮದಹನದ ಹಬ್ಬ.


ಇಂಗಳಗಿ ದಾವಲಮಲೀಕ
ಶಿಕ್ಷಕ ಸಾಹಿತಿಗಳು ಹತ್ತಿಮತ್ತೂರು

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group