ಪುನೀತ್ ಆದರ್ಶಗಳು ಯುವಜನತೆಗೆ ದಾರಿದೀಪವಾಗಲಿ-ಡಾ.ಭೇರ್ಯ ರಾಮಕುಮಾರ್

Must Read

ಪುನೀತ್ ಈ ಶತಮಾನದ ಮಹಾನ್ ಪುರುಷ.ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ನಟನೆ ಆರಂಭಿಸಿ ಎರಡು ಬಾರಿ ರಾಜ್ಯಪ್ರಶಸ್ತಿ ಹಾಗೂ ಒಂದು ಬಾರಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಅಪ್ಪು ನಟನೆ ಹಾಗೂ ಗಾಯನದ ಮೂಲಕ ತಾವು ಗಳಿಸಿದ ಹಣವನ್ನು ಅಶಕ್ತರ ಸೇವೆಗೆ ವಿನಿಯೋಗಿಸುವ ಮೂಲಕ ಇಡೀ ವಿಶ್ವಕ್ಕೇ ಮಾದರಿಯಾಗಿದ್ದಾರೆ .ಯುವಜನತೆ ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ನುಡಿದರು.

ಮೈಸೂರು ಜಿಲ್ಲೆಯ ಭೇರ್ಯ ಗ್ರಾಮದ ಡಾ.ಪುನೀತ್ ರಾಜಕುಮಾರ್ ಅಭಿಮಾನಿ ಬಳಗವು ಪುನೀತ್ ಅವರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಸಾಮೂಹಿಕ ರಕ್ತದಾನ, ನೇತ್ರದಾನ ಹಾಗೂ ದೇಹದಾನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಹಿಂದಿನ ತಲೆಮಾರಿನ ಜನತೆಗೆ ಡಾ.ರಾಜಕುಮಾರ್ ಅವರ ಚಲನಚಿತ್ರ ಗಳು ಹಾಗೂ ಜೀವನ ಆದರ್ಶವಾಗಿತ್ತು.ಅದೇ ರೀತಿ ಇಂದಿನ ಯುವ ಜನಾಂಗಕ್ಕೆ ಪುನೀತ್ ರಾಜಕುಮಾರ್ ಅವರ ಚಲನ ಚಿತ್ರ ಹಾಗೂ ಸಮಾಜಸೇವೆಯ ಗುಣವೇ ಆದರ್ಶವಾಗಬೇಕು ಎಂದು ಕರೆ ನೀಡಿದ ಅವರು ಪುನೀತ್ ರಾಜಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡುವ ಮೂಲಕ ತನ್ನನ್ನು ತಾನೇ ಗೌರವಿಸಿಕೊಂಡಿದೆ.ಪ್ರತಿಯೊಬ್ಬರೂ ನೇತ್ರದಾನ, ರಕ್ತದಾನ, ದೇಹದಾನ ಮಾಡಬೇಕು. ತಮ್ಮ ಜನ್ಮ ದಿನದಂದು, ತಮ್ಮ ವಿವಾಹ ವಾರ್ಷಿಕೋತ್ಸವ ದಿನದಂದು, ತಮ್ಮ ಮಕ್ಕಳ ಜನ್ಮದಿನದಂದು, ತಮ್ಮ ತಂದೆ-ತಾಯಿಗಳ ಜನ್ಮದಿನದಂದು ಹಾಗೂ ಶ್ರಾದ್ದದ ದಿನಗಳಂದು ಒಂದೊಂದು ಸಸಿಯನ್ನು ನೆಡುವ ಮೂಲಕ ಪರಿಸರ ಉಳಿಸಬೇಕೆಂದು ಕರೆ ನೀಡಿದರು.

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಡಿ. ರವಿಶಂಕರ್ ಅವರು ಪುನೀತ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿ ಪುನೀತ್ ರಾಜಕುಮಾರ್ ಅವರ ಚಿತ್ರನಟನೆ ಹಾಗೂ ಸಮಾಜಸೇವೆ ಎರಡೂ ಎಂದೆಂದೂ ಅಮರವಾಗಿರುವಂತಹವು. ಕನ್ನಡ ಚಲನಚಿತ್ರರಂಗಕ್ಕೆ ಹಲವು ಅತ್ಯುತ್ತಮ ಚಿತ್ರಗಳನ್ನು ನೀಡಿದ ಪುನೀತ್ ಅವರು ತಂದೆ ಡಾ.ರಾಜ್ ಕುಮಾರ್ ಅವರಂತೆಯೇ ಸರಳ, ಜನಪರ ವ್ಯಕ್ತಿತ್ವ ಉಳ್ಳವರಾಗಿದ್ದರು.ಬಡವರು, ದೀನದುರ್ಬಲರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು.ಅವರಂತಹ ವ್ಯಕ್ತಿಯ ಹಠಾತ್ ಮರಣ ಕನ್ನಡ ಚಲನಚಿತ್ರ ರಂಗಕ್ಕೆ ಹಾಗೂ ಸಮಾಜಕ್ಕೆ ಅಪಾರ ನಷ್ಟ ಉಂಟುಮಾಡಿದೆ .ಅವರ ಅಭಿಮಾನಿಗಳು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಕನಸುಗಳನ್ನು ನನಸು ಮಾಡಬೇಕೆಂದು ಕರೆ ನೀಡಿದರು.

ಸಾಹಿತಿ ಹಾಗೂ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಡೆಗ್ಗನಹಳ್ಳಿ ಆನಂದ್, ಭೇರ್ಯ ಪುನೀತ್ ರಾಜ ಕುಮಾರ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳಾದ ಸಚಿನ್, ರಘು, ಮುಖಂಡರಾದ ಮಂಜಪ್ಪ, ಮೋಹನ್ ಕುಮಾರ್, ಟಿ.ಸಿ.ಮಂಜು, ನಿಶಾದ್, ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ಸಮಯದಲ್ಲಿ ನಡೆದ ರಕ್ತದಾನ ಕಾರ್ಯಕ್ರಮದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group