ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

Must Read

ಬೆಳಗಾವಿ: ರವಿವಾರ ದಿ. 20 ರಂದು ಬೆಳಗಾವಿಯ ನ್ಯಾಯಾಲಯ ಆವರಣದ ವಕೀಲರ ಸಭಾಭವನದಲ್ಲಿ ‘ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ ) ಬೆಂಗಳೂರು’ ರವರ ಬೆಳಗಾವಿ ಘಟಕದ ‘ಉದ್ಘಾಟನಾ ಸಮಾರಂಭ’ ಮತ್ತು ‘ಪದಾಧಿಕಾರಿಗಳ ಪದಗ್ರಹಣ ಸಮಾರಂಭ’ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿಗಳಾದ ಡಾ. ಗುರುದೇವಿ ಹುಲೆಪ್ಪನವರಮಠ ವಹಿಸಲಿದ್ದು ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್ ಉಪ್ಪಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ರಾಜ್ಯಾಧ್ಯಕ್ಷರಾದ ಶಾಲಿನಿ ರುದ್ರಮುನಿ ಯವರು ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದು ಡಾ. ಹಸೀನಾ ಎಚ್ ಕೆ ರವರು ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬಿ ಜೆ ನರಸಿಂಹಮೂರ್ತಿ, ಸಾಹಿತಿಗಳಾದ ಹಮೀದಾ ಬೇಗಂ ದೇಸಾಯಿ,ಜ್ಯೋತಿ ಬದಾಮಿ,ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕರಾದ ಪಾಂಡುರಂಗ ದೊಡ್ಡಕುರುಬರ,ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪ್ರಭು ಯತ್ನಟ್ಟಿ, ವಕೀಲರ ಸಂಘದ ಜನರಲ್ ಸೆಕ್ರೆಟರಿ ಗಿರೀಶ ಪಾಟೀಲ ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಮತ್ತು ಸುಶೀಲ ಗುರವ ರವರು ಸಂಪಾದಿಸಿದ ‘ಟಂಕಾಸಿರಿ ‘ಕೃತಿ ಲೋಕಾರ್ಪಣೆಗೊಳ್ಳಲಿದೆ. ಸಾಹಿತ್ಯಸಕ್ತರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷೆ ಸುಶೀಲ ಗುರವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group