ಮಾ. .೨೬ ರಂದು ಮೈಸೂರಿನಲ್ಲಿ ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ

Must Read

ಮೈಸೂರು – ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ಫೌಂಡೇಷನ್ ವತಿಯಿಂದ ಶ್ರೀ ವಾಸುದೇವ ಮಹಾರಾಜ್ ರವರ ೮೩ನೇ ಜಯಂತಿ ಅಂಗವಾಗಿ ಮೈಸೂರಿನ ತ್ಯಾಗರಾಜ ರಸ್ತೆಯ ಪತ್ರಕರ್ತರ ಭವನದಲ್ಲಿ ಮಾ..೨೬ ರಂದು ಬೆಳಿಗ್ಗೆ ೧೧.೦೦ ಗಂಟೆಗೆ  ವಿವಿಧ ಕ್ಷೇತ್ರಗಳ ಸಾಧಕರಿಗೆ “ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ” ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ .

ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದು,  ಸಾಂಸ್ಕೃತಿಕ ಚಿಂತಕ ಹಾಗು   ಶ್ರೀವಾಸುದೇವ ಮಹಾರಾಜ್ ಫೌಂಡೇಷನ್ ಅಧ್ಯಕ್ಷ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರು ಪ್ರಾಸ್ತಾವಿಕ ನುಡಿಗಳನ್ನಾಡುವರು. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ನಿರ್ವಾಣ ಯೋಗಶಾಲೆ ಸಂಸ್ಥಾಪಕ ಡಾ.ಟಿ.ಎನ್ ಶಶಿಕುಮಾರ್ ಸಾಧಕರನ್ನು ಸನ್ಮಾನಿಸುವರು. ಹಿರಿಯ ಸಮಾಜ ಸೇವಕ  ಡಾ.ಕೆ ರಘುರಾಮ ವಾಜಪೇಯಿ ಹಾಗು ಕಾಂಗ್ರೆಸ್ ಮುಖಂಡ ಎನ್.ಎಂ. ನವೀನ ಕುಮಾರ್ ಕಾರ‍್ಯಕ್ರಮದಲ್ಲಿ ಉಪಸ್ಥಿತರಿರುವರು.

ವಿವಿಧ ಕ್ಷೇತ್ರದ ಗಣ್ಯ ಸಾಧಕರಾದ ಶಾಸನ ಸಂಶೋಧನೆಗಾಗಿ ಫಿಲಿಯೋಜಾ ಮತ್ತು ವಸುಂಧರಾ ರವರಿಗೆ ಜೀವಮಾನ ಸಾಧನೆ ಪ್ರಶಸ್ತಿ ; ಸಮಾಜ ಸೇವೆ – ಸಂಘಟನೆಗಾಗಿ ಬೆಂಗಳೂರಿನ ಎಂ.ಬಸವರಾಜು ; ರಂಗಭೂಮಿ – ಡಾ.ಲೀಲಾ ಬಸವರಾಜು ; ಯೋಗ- ಡಾ.ಪಿ.ಎನ್.ಗಣೇಶ ಕುಮಾರ್ , ರಾಜಕೀಯ – ಸಮಾಜ ಸೇವೆ ಕೆ.ಪಿ.ಯೋಗೇಶ್ ರವರಿಗೆ “ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ”ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಆಯೋಜಕರಾದ ವಾಸುದೇವ ಮಹಾರಾಜ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಎಂ.ವಿ.ನಾಗೇಂದ್ರ ಬಾಬು -ಸಂಚಾಲಕರಾದ ಎನ್.ಅನಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ವಿವರಗಳಿಗೆ : 9035618076

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group