ಮೂಡಲಗಿ: ಕೇಂದ್ರ ಸರ್ಕಾರ ದೇಶಾದ್ಯಂತ ದೀನ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯಡಿ ಒಟ್ಟು 18,374 ಗ್ರಾಮಗಳನ್ನು ವಿದ್ಯುದೀಕರಣಗೊಳಿಸಲಾಗಿದೆ ಎಂದು ಕೇಂದ್ರ ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್ ಕೆ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.
ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ದೀನದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯ ಕುರಿತು ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ದೇಶದ ಪ್ರತಿ ಗ್ರಾಮ ಮತ್ತು ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸೌಭಾಗ್ಯ ಯೋಜನೆ ಆರಂಭಿಸಿದ್ದರು.
ಇದನ್ನು ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ – ಸೌಭಾಗ್ಯ ಎಂದು ಹೆಸರಿಸಲಾಯಿತು. ಇದುವರೆಗೆ 2.86 ಕೋಟಿ ಮನೆಗಳಿಗೆ ವಿದ್ಯುದೀಕರಣ ಈ ಯೋಜನೆಯ ಮೂಲಕ ನೀಡಲಾಗಿದೆ. ಎಂದು ಮಾನ್ಯ ಸಚಿವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.