ಉದ್ಯಾನವನ ಅಭಿವೃದ್ಧಿಗೆ ಕಾಮಗಾರಿಗೆ ಭೂಮಿಪೂಜೆ

Must Read

ಸಿಂದಗಿ: ಪಟ್ಟಣದ ಪುರಸಭೆ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ವಾರ್ಡ ನಂ 3 ರಲ್ಲಿ ರೂ 4 ಲಕ್ಷ ಅನುದಾನದಲ್ಲಿ ಶ್ರೀ ಸಂಗಮೇಶ್ವರ ಲೇಔಟ್‍ನಲ್ಲಿರುವ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಅವರು ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿ, ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ನಗರೋತ್ಥಾನ ಯೋಜನೆಯಡಿ ಎಲ್ಲ ವಾರ್ಡುಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಲಿವೆ. ಉದ್ಯಾನವನ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಇದ್ದ ಬಗ್ಗೆ ಅಂಗನವಾಡಿ ಸಿಬ್ಬಂದಿ ತಿಳಿಸಿದ್ದು ಕೂಡಲೇ ನೀರಿನ ಸಮಸ್ಯೆ ನೀಗಿಸುವಂತೆ ಜೆಇ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಹಾಸೀಂ ಆಳಂದ, ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮುದುಗೋಳಕರ, ಕಿರಿಯ ಅಭಿಯಂತರ ಎ.ಜೆ.ನಾಟೀಕಾರ, ಸದಸ್ಯ ಶ್ರೀಶೈಲ ಬೀರಗೊಂಡ, ಶಿವು ಬಡಿಗೇರ, ಶಿವಕುಮಾರ ಹರನಾಳ ಸೇರಿದಂತೆ ಅನೇಕರಿದ್ದರು.

Latest News

ಸಿಂದಗಿ : ಆರೆಸ್ಸೆಸ್ ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ

ಸಿಂದಗಿ; ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ಶನಿವಾರ...

More Articles Like This

error: Content is protected !!
Join WhatsApp Group