ಶೈಕ್ಷಣಿಕ ಕಾರ್ಯಾಗಾರ ಏ. 10 ರಂದು

Must Read

ಸಿಂದಗಿ: ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಆಶ್ರಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾಗಿ ಶೈಕ್ಷಣಿಕ ಕಾರ್ಯಗಾರವು ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಏ.10 ರವಿವಾರ ಮಧ್ಯಾನ್ಹ 3.30 ಗಂಟೆಗೆ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕ ಎಸ್.ಎನ್.ಬಗಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ರಮೇಶ ಭೂಸನೂರ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತ ಸದಸ್ಯರಾದ ಅರುಣ ಶಹಾಪೂರ, ಹಣಮಂತ ನಿರಾಣಿ ಮತ್ತು ಅನೇಕ ರಾಜಕೀಯ ಮುಖಂಡರು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯ ಮೂಲಕ ಆದೇಶಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group