ಆಲಮೇಲ ಕೋ-ಆಪ್ ಬ್ಯಾಂಕ್ ನ ಎರಡನೇ ಶಾಖೆ

Must Read

ಸಿಂದಗಿ; ಆಲಮೇಲ ಪಟ್ಟಣದಲ್ಲಿ ಹಲವು ವರ್ಷಗಳಿಂದ ಪ್ರಾರಂಭಗೊಂಡು ಜನತೆಗೆ ಆರ್ಥಿಕ ನೆರವು ಕೊಟ್ಟಿದ್ದು ಸಿಂದಗಿ ಪಟ್ಟಣದ ಜನತೆಗೆ ಆರ್ಥಿಕ ನೆರವು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇದೇ ಏ 11 ರಂದು ಸೋಮವಾರ ದಿ ಆಲಮೇಲ ಕೋ-ಆಪರೇಟಿವ್ ಬ್ಯಾಂಕ್ ಲಿ. ಎರಡನೇ ಶಾಖೆಯನ್ನು ಹಳೆ ಕೆನರಾ ಬ್ಯಾಂಕ್ ಸ್ಥಳದಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದು ಆಲಮೇಲ ಅರ್ಬನ ಬ್ಯಾಂಕ ಅಧ್ಯಕ್ಷ ಶಿವಕುಮಾರ ಗುಂದಗಿ ತಿಳಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾನ್ನಿಧ್ಯವನ್ನು ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಚಂದ್ರಶೇಖರ ಶಿವಾಚಾರ್ಯರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಮಾಜಿ ಸಚಿವ ಶಾಸಕ ಶಿವಾನಂದ ಪಾಟೀಲ ಮಾಡಲಿದ್ದಾರೆ. ಅತಿಥಿಗಳಾಗಿ ಶಾಸಕ ರಮೇಶ ಭೂಸನೂರ ವಿ.ಪ ಸದಸ್ಯ ಅರುಣ ಶಹಾಪೂರ, ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ, ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ, ಸಿಂದಗಿ ಅರ್ಬನ್ ಬ್ಯಾಂಕ ಅಧ್ಯಕ್ಷ ಸುರೇಶ ಬಾಬು ಜೋಗುರ, ಬಸವರಾಜ ಮಂಟೂರು, ಅಶೋಕ ವಾರದ, ಭಾಗ್ಯಶ್ರೀ ಎಸ್ ಕೆ ಆಗಮಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group