ಐತಿಹಾಸಿಕ ಶಿವನ ಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿಗಳು

Must Read

ಬೀದರ್ – ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪೂರ್ ಗ್ರಾಮದಲ್ಲಿ ಚಾಳಕಾದೇವಿ ಬೆಟ್ಟದಲ್ಲಿರುವ ಶಿವನ ಮೂರ್ತಿ ಜೊತೆಗೆ ಗಣೇಶನ ಮೂರ್ತಿಯನ್ನೂ ಕಿಡಿಗೇಡಿಗಳು ವಿರೂಪಗೊಳಿಸಿದ ಘಟನೆ ತಡರಾತ್ರಿ ನಡೆದಿದೆ.

ಮಹಾನ್ ಸಿದ್ದಿ ಪುರುಷ ಶ್ರೀ ಸಿದ್ದಾರೂಢರ ಜನ್ಮ ಸ್ಥಳದಲ್ಲಿ ಈ ಘಟನೆ ನಡೆದಿದ್ದು ಶಿವನ ಹಾಗೂ ಗಣೇಶನ ಮೂರ್ತಿಗಳನ್ನು ವಿರೂಪಗೊಳಿಸಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರ್ತಿಗಳನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಈ ಕೂಡಲೆ ಬಂಧಿಸಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದು ಖಟಕ್ ಚಿಂಚೋಳಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದರು .ಈ ಕುರಿತು ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group