ಸಿಂದಗಿ: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದ ಬಗ್ಗೆ ಸತ್ಯಾ ಸತ್ಯತೆಯನ್ನು ಅರಿಯದೇ ಸಚಿವ ಕೆ.ಎಚ್.ಈಶ್ವರಪ್ಪ ಅವರಿಗೆ ಕಾಂಗ್ರೆಸ್ ನಾಯಕರುಗಳು ಕೂಡಲೇ ರಾಜೀನಾಮೆ ಕೊಡಿಸಬೇಕು ಎಂದು ಸರಕಾರಕ್ಕೆ ಒತ್ತಡ ಹಾಕುತ್ತಿದ್ದು ಈಶ್ವರಪ್ಪ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ನಾಯಕರಿಗಿಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗಗಳ ತಾಲೂಕ ಘಟಕದ ಅಧ್ಯಕ್ಷ ರವಿಕಾಂತ ನಾಯ್ಕೋಡಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಈಶ್ವರಪ್ಪನವರು ಹಲವಾರು ಬಾರಿ ಶಾಸಕರಾಗಿ, ಸಚಿವರಾಗಿ ಉಪಮುಖ್ಯಮಂತ್ರಿಗಳಾಗಿ ಪ್ರಾಮಾಣಿಕವಾಗಿ ರಾಜಕೀಯ ಮಾಡಿದ್ದಾರೆ ಇದನ್ನು ಸಹಿಸದ ಕಾಂಗ್ರೆಸ್ ಮುಖಂಡರು ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ರಾಜೀನಾಮೆ ಕೊಡಿಸಲು ರಸ್ತೆಗಿಳಿದಿದ್ದಾರೆ ಬಿಜೆಪಿ ಸರಕಾರ ವಿರೋಧ ಪಕ್ಷದ ನಾಯಕರುಗಳಿಂದ ಹೇಳಿಸಿಕೊಳ್ಳುವ ಮಟ್ಟದಲ್ಲಿ ಇಲ್ಲ. ಮುಖ್ಯಮಂತ್ರಿಗಳು ಈ ವಿಷಯ ಕುರಿತು ಸಮಗ್ರ ವರದಿ ಪಡೆದು ನಿರ್ಧಾರ ಕೈಕೊಳ್ಳಬೇಕು ಅಲ್ಲಿಯ ವರೆಗೆ ಸಚಿವ ಈಶ್ವರಪ್ಪ ಅವರಿಗೆ ರಾಜೀನಾಮೆ ಪಡೆಯುವ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.