ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು ಬಿಸಿಲಿನ ತಾಪದಿಂದ ಮುಕ್ತಿ ಪಡೆಯಲು ಈಜಾಡಲೆಂದು ಹೋದ ಯುವಕನೊಬ್ಬ ನದಿಯಲ್ಲಿ ನೀರುಪಾಲಾದ ದುರದೃಷ್ಟಕರ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ತಳವಾಡ ಎಂ. ಗ್ರಾಮದಲ್ಲಿ ನಡೆದಿದೆ.
ಪರಮೇಶ ಬೊರಾಳೆ ಎಂಬ (22) ಯುವಕ ಭಾನುವಾರ ಬಿಸಿಲಿನ ಸೆಕೆಯಿಂದ ತಪ್ಪಿಸಿಕೊಳ್ಳಲು ನದಿಗೆ ಇಳಿದಿದ್ದಾನೆ. ಆದರೆ ಮರಳಿ ಬರಲಾಗದೇ ಮುಳುಗಿದ್ದಾನೆ ಎನ್ನಲಾಗಿದೆ. ಎರಡು ದಿನಗಳಾದರೂ ಯುವಕನ ದೇಹ ಪತ್ತೆಯಾಗಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ಜಾರಿಯಲ್ಲಿದೆ.
ವರದಿ : ನಂದಕುಮಾರ ಕರಂಜೆ, ಬೀದರ