ತಾಡಪಾಲಗಾಗಿ ಅರ್ಜಿ ಆಹ್ವಾನ

Must Read

ಸಿಂದಗಿ: 2021-22ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿಯಲ್ಲಿ ತಾಡಪಾಲಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಶ್ರೀಮತಿ ಪಾರ್ವತಿ ಎನ್. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಅರ್ಜಿ ಸಲ್ಲಿಸುವ ರೈತರು ತಮ್ಮ ಆಧಾರ ಕಾರ್ಡ, ಪಹಣಿ, ಎಫ್‍ಐಡಿ ಸಂಖ್ಯೆ ಪ್ರತಿ, ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರವನ್ನು ಅರ್ಜಿ ನಮೂನೆಯೊಂದಿಗೆ ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ರೈತ ಸಂಪರ್ಕ ಕೇಂದ್ರಕ್ಕೆ ಏಪ್ರಿಲ್ 26ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ರೈತರು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು. ಕಳೆದ ವರ್ಷ ತಾಡಪಾಲ ತೆಗೆದುಕೊಂಡ ರೈತರು ಈ ವರ್ಷ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಏಪ್ರಿಲ್ 29 ರಂದು ಲಾಟರಿ ಮುಖಾಂತರ ರೈತರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ರೈತರು ಮೇ 4 ರಿಂದ 6 ರ ಒಳಗೆ ಸ್ವೀಕೃತಿ ಪತ್ರ ನೀಡಿ ತಾಡಪಾಲ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group