ಖ್ಯಾತ ರಂಗ ಕಲಾವಿದೆ ಶ್ರೀಮತಿ ಲಕ್ಷ್ಮೀಬಾಯಿ ಬಾಳಪ್ಪ ಏಣಗಿ ಅವರಿಗೆ ಬೆಳಗಾವಿ ಜಿಲ್ಲಾ ಕಸಾಪ ಶ್ರದ್ಧಾಂಜಲಿ

Must Read

ಬೆಳಗಾವಿ: ನಾಟ್ಯ ಭೂಷಣ ದಿ. ಏಣಗಿ ಬಾಳಪ್ಪ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀಬಾಯಿ ಬಾಳಪ್ಪ ಏಣಗಿ ಅವರು ತಮ್ಮ 96ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ತೀವ್ರ ಸಂತಾಪ ವ್ಯಕ್ತ ಪಡಿಸಿದೆ.

ಲಕ್ಷ್ಮೀಬಾಯಿ ಏಣಗಿ ಅವರು ರಂಗ ಕಲಾವಿದೆಯಾಗಿ ಬಹು ದೊಡ್ಡ ಪ್ರಮಾಣದಲ್ಲಿ ಹೆಸರು ಮಾಡಿದ್ದರು. 1940-50ರ ದಶಕದಲ್ಲಿ ಕನ್ನಡ ಮರಾಠಿ ರಂಗಭೂಮಿಯಲ್ಲಿ ಪ್ರಸಿದ್ದ ಕಲಾವಿದೆಯಾಗಿ ಛಾಪು ಮೂಡಿಸಿದ್ದರು. ಕರ್ನಾಟಕದ ಏಕೀಕರಣ ಚಳವಳಿ ನಂತರ ನಾಟಕಗಳ ಮೂಲಕ ಕನ್ನಡ ಕಟ್ಟುವ ಕೆಲಸ ಮಾಡಿದರು. ಸಿಂಗಾರೆವ್ವ ಮತ್ತು ಅರಮನೆ ಸೇರಿದಂತೆ ಹತ್ತಾರು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅವರು ಇಡೀ ತಮ್ಮ ಜೀವನವನ್ನೇ ರಂಗಭೂಮಿಗಾಗಿ ಮುಡುಪಾಗಿಟ್ಟಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂರಕ್ಕೂ ಹೆಚ್ಚು ರಂಗ ಸನ್ಮಾನಗಳು ಅವರ ಸಾಧನೆಗೆ ಸಂದಿದ್ದವು.

ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ, ಅವರ ಕುಟುಂಬಕ್ಕೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು, ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಹಾಗೂ ಕಸಾಪ ಬೆಳಗಾವಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು, ಸಾಹಿತಿಗಳು, ಸಮಸ್ತ ಕನ್ನಡ ಮನಸ್ಸುಗಳು ಶ್ರದ್ಧಾಂಜಲಿಯನ್ನು ಸಲ್ಲಿಸಿದ್ದಾರೆ.


ಮಾಹಿತಿ:ವರದಿ: ಆಕಾಶ್ ಅರವಿಂದ ಥಬಾಜಿ

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group