ಸಿಂದಗಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್‍ರನ್ನು ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಮತ್ತು ಆರೆಸ್ಸೆಸ್ ಪರಿವಾರದ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಈರಣ್ಣ ರಾವುರ ಮಾತನಾಡಿ, ಭರತ ಮಾತೆಯ ಮಗನಾದ ಹಾಗೂ ಹಿಂದುತ್ವವಾದಿ ಟೈಲರ್ ಕನ್ನಯ್ಯ ಲಾಲ್ ಅವರನ್ನು ಯಾವುದೇ ಕಾರಣವಿಲ್ಲದೇ ಏಕಾಏಕಿಯಾಗಿ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಧರ್ಮಾಂಧರನ್ನು ಕೂಡಲೇ ಬಂಧಿಸುವ ಮೂಲಕ ಅವರನ್ನು ಬಹಿರಂಗವಾಗಿ ನೇಣಿಗೇರಿಸಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಶಿಲ್ಪಾ ಕುದರಗೊಂಡ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶೇಖರಗೌಡ ಹರನಾಳ, ಶಿವಕುಮಾರ ಬಿರಾದಾರ, ಶ್ರೀಶೈಲ ಪಾರಗೊಂಡ, ಸುನಂದಾ ಯಂಪೂರೆ, ಅಶೋಕ ನೆಗಿನಾಳ ಸೇರಿದಂತೆ ಅನೇಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.