spot_img
spot_img

ಬೇಲೂರು ಗ್ರಾಮ ಪಂಚಾಯತ ನಲ್ಲಿ ಭ್ರಷ್ಟಾಚಾರ ಆರೋಪ

Must Read

spot_img
- Advertisement -

ಬೀದರ: ಗಡಿ ಜಿಲ್ಲೆಯ ನೂತನ ತಾಲ್ಲೂಕು ಹುಲಸೂರ ವ್ಯಾಪ್ತಿಯಲ್ಲಿ ಹಲವು ಗ್ರಾಮ ಪಂಚಾಯತ ನಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಬಿದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ಆರೊಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಬೇಲೂರು ಗ್ರಾಮ ಪಂಚಾಯಿತಿಗೆ ಭೇಟಿ ಕೊಟ್ಟು ಗ್ರಾಮದಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಮಯದಲ್ಲಿ ಬೇಲೂರು ಗ್ರಾಮದ ಜನತೆ ಗ್ರಾಮ ಪಂಚಾಯಿತಿಯ ವಿರುದ್ಧ ಆರೋಪದ ಸುರಿಮಳೆ ಸುರಿಸಿದರು.

- Advertisement -

ಕೇಂದ್ರ ಸರ್ಕಾರದ ನರೇಗಾ ಯೋಜನೆ ಅಡಿಯಲ್ಲಿ ಎಲ್ಲರಿಗೂ ಕೆಲಸ ಕೊಡಬೇಕು ಆದರೆ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಮಹಿಳೆಯರಿಗೆ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ‌ಕೊಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪ ಮಾಡಿದರು.

ಕೆಲಸ ಮಾಡದೆ ನಕಲಿ ಬಿಲ್ ಸೃಷ್ಟಿಸಿ ದುಡ್ಡನ್ನು ಲೂಟಿ ಮಾಡಿದ್ಧಾರೆ ಹಾಗು ಮಾಡಿರುವ ಕೆಲಸಗಳು ಸಹ ಕಳಪೆ ಕಾಮಗಾರಿಯಿಂದ ಕೂಡಿವೆ ಎಂದು ಬೇಲೂರು ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಅಧಿಕಾರಿ ಸೂರ್ಯಕಾಂತ ರವರ ಮುಂದೆ ತಮ್ಮ ಅಳಲನ್ನು ತೊಂಡಿಕೊಂಡಿದ್ದಾರೆ.

ದೂರಿಗೆ ಸ್ಪಂದಿಸಿದ ಅಧಿಕಾರಿಗಳು ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಮನಮೋಹನ ಸಿಂಗ್ ನಿಧನ : ಕಡಾಡಿ ಸಂತಾಪ

ಮೂಡಲಗಿ: ಕೇಂದ್ರ ಹಣಕಾಸು ಸಚಿವರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group