Homeಸುದ್ದಿಗಳುಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ಮೂಡಲಗಿ ಸೆ.17: ಪ್ರಧಾನಿ ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಶನಿವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿಯವರ ಜೊತೆಗೂಡಿ, ಚಾಲನೆ ನೀಡಿ ಮಾತನಾಡಿದ ಅವರು, ಅರಭಾವಿ ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನಲ್ಲಿ, ಅರಭಾವಿಯ ಕ್ಷೇತ್ರದಲ್ಲಿ ವಿವಿಧ ರೀತಿಯ ಸೇವೆಯನ್ನು ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದರು.

ಅಭಿಯಾನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಕೋವಿಡ್ ಲಸಿಕಾ ಅಭಿಯಾನ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಈ ಸಂಧರ್ಭದಲ್ಲಿ ಪುರಸಭೆ ಅದ್ಯಕ್ಷ ಹನಮಂತ ಗುಡ್ಲಮನಿ,ಪುರಸಭೆ ಸದಸ್ಯರು, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೊಳ, ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ, ಆರೋಗ್ಯ ಕೇಂದ್ರದ ಸಿಬ್ಬಂದಿ ಸೇರಿದಂತೆ ಬಿಜೆಪಿಯ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group