ಬೀದರ – ಪಿಎಫ್ಐ ಹಾಗೂ ಎಸ್ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ಐಎ ಹಾಗೂ ಇಡಿ ದಾಳಿ ಹಿನ್ನೆಲೆಯಲ್ಲಿ ದಾಳಿ ಖಂಡಿಸಿ ಇಂದು ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯ ನೂರಾರಕ್ಕೂ ಅಧಿಕ ಜನರು ಹಾಗೂ ಮಕ್ಕಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪಿಎಫ್.ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಲಾಯಿತು.
ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಹುಮ್ನಾಬಾದ್ ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ವರದಿ: ನಂದಕುಮಾರ ಕರಂಜೆ, ಬೀದರ