ಸೆ.೨೬ ರಂದು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-೨೦೨೨

Must Read

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೨೨ ಕಾರ್ಯಕ್ರಮವನ್ನು ಸೆ. ೨೬ ಸೋಮವಾರದಂದು ಬೆಳಗ್ಗೆ ೧೦ ರಿಂದ ಸಂಜೆ ೫ ರವರೆಗೆ ಆಯೋಜಿಸಲಾಗಿದೆ.

೧ ರಿಂದ ೪ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ೫ ರಿಂದ ೭ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಮೇಘಾ  ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ೮ ರಿಂದ ೧೦ ನೇ ತರಗತಿ ಕಲೋತ್ಸವ ಸ್ಪರ್ಧೆಗಳು ಮೂಡಲಗಿಯ ಎಲ್ ವೈ ಅಡಿಹುಡಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿಭಾಗವಾರು ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಜರುಗಲಿದ್ದು, ತಾಲೂಕಾ ಹಂತದ ವಿವಿಧ ಇಲಾಖೆಗಳ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸರಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘ, ಚಿತ್ರಕಲಾ, ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group