ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯ- ರವಿ ಸೋನವಾಲಕರ

Must Read

ಮೂಡಲಗಿ: ‘ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಪರಿಗಣಿಸದೆ ಕ್ರೀಡಾ ಮನೋಭವ ಮತ್ತು ಶ್ರದ್ಧೆಯಿಂದ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ರವಿ ಪಿ. ಸೋನವಾಲಕರ ಹೇಳಿದರು.

ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟದ  ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳು ಅವಶ್ಯವಿದೆ ಎಂದರು.

ಅತಿಥಿ ಪಿಎಸ್‍ಐ ಎಚ್.ವೈ. ಬಾಲದಂಡಿ ಮಾತನಾಡಿ, ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡಬೇಕಾದರೆ ಪ್ರಾಥಮಿಕ ಹಂತವು ಅಡಿಪಾಯವಿದ್ದಂತೆ. ಇದು ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಪ್ರೇರಣೆ ನೀಡುತ್ತದೆ ಎಂದರು.

ಅತಿಥಿ ಬಾಲಶೇಖರ ಬಂದಿ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವವನ್ನು ರೂಪಿಸುತ್ತವೆ. ಕ್ರೀಡೆಗೆ ಜಾತಿ, ಧರ್ಮ, ಮೇಲು, ಕೀಳು ಎನ್ನುವದಿಲ್ಲ. ಕ್ರೀಡಾ ಸಂಘಟನೆಗಳಿಂದ ಶಾಂತಿ, ಸೌಹಾರ್ದತೆಯ ಬೆಳೆಯುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಪ್ರಾಸ್ತಾವಿಕ ಮಾತನಾಡಿದರು.

ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಿಮನಿ, ಉಪಾಧ್ಯಕ್ಷೆ ರೇಣುಕಾ ಹಾದಿಮನಿ, ತಾಲ್ಲೂಕು ಪಂಚಾಯ್ತಿ ಸಿಇಒ ಎಫ್.ಎಸ್. ಚಿನ್ನನ್ನವರ, ಪುರಸಭೆ ಸದಸ್ಯರಾದ ಶಿವಾನಂದ ಚಂಡಕಿ, ರವಿ ಸಣ್ಣಕ್ಕಿ, ಶಿವಾನಂದ ಸಣ್ಣಕ್ಕಿ, ಹುಸೇನ ಶೇಖ್, ಡಾ. ಭಾರತಿ ಕೋಣಿ, ವೆಂಕಟೇಶ ಸೋನವಾಲಕರ, ಪ್ರದೀಪ ಲಂಕೆಪ್ಪನವರ, ಲಕ್ಷ್ಮಣ ಅಡಿಹುಡಿ ಇದ್ದರು.

ಶಿವಾಪುರದ ಕೆ.ಎಚ್. ಪಾಟೀಲ ನಿರೂಪಿಸಿದರು, ಎಲ್.ಎ. ಮೇಕೆಮಡಿ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group