- Advertisement -
ಬೀದರ – ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಾರೆಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಜಿಲ್ಲೆಯ ಹುಮನಾಬಾದ ಆರ್ ಟಿಓ ಚೆಕ್ ಪೋಸ್ಟ್ ಮೇಲೆ ಬೆಳ್ಳಂಬೆಳಗ್ಗೆಯೇ ದಾಳಿ ಮಾಡಿ ಕಡತಗಳನ್ನು ಪರಿಶೀಲಿಸಿದರು.
ಲೋಕಾಯುಕ್ತ ದಾಳಿ ವೇಳೆ ಹುಮ್ನಾಬಾದ್ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮೊತ್ತದ ಹಣ ಪತ್ತೆಯಾಗಿದೆ ಎನ್ನಲಾಗಿದೆ.
- Advertisement -
ಕಲಬುರ್ಗಿ ಲೋಕಾಯುಕ್ತ ಎಸ್ ಪಿ ಯವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು ಲೋಕಾಯುಕ್ತಾ ಆಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರೆದಿದೆ.
ವರದಿ: ನಂದಕುಮಾರ ಕರಂಜೆ, ಬೀದರ