ಬೀದರ್ : ದೇವಿ ಪಲ್ಲಕ್ಕಿ ಉತ್ಸವ, ರಾವಣ ಪ್ರತಿಕ್ರತಿ ದಹನ ವಿಜೃಂಭಣೆಯಿಂದ ದಸರಾ ಆಚರಣೆ

Must Read

ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ವಿಜಯ ದಶಮಿ ಪ್ರಯುಕ್ತ ಜಿಲ್ಲಾದ್ಯಂತ ವಿವಿಧೆಡೆ ವಿಜಯ ದಶಮಿ  ಸೀಮೋಲ್ಲಂಘನೆ, ದೇವಿ ಮಂದಿರಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು.

ನವಮಿದಿನ ಮಂದಿರಗಳಲ್ಲಿ ಆಯುಧ ಪೂಜೆ, ಗಜ ಹಾಗೂ ಅಶ್ವ ಪೂಜೆಗಳು ಜರುಗಿದವು. ನಗರದಲ್ಲಿ ಶ್ರೀ ರಾಮಲೀಲಾ ಉತ್ಸವ ಸಮಿತಿ ವತಿಯಿಂದ ವಿಜಯದಶಮಿ ಪ್ರಯುಕ್ತ ಬೀದರ್ ನಗರದ ಸಾಯಿ ಆದರ್ಶ ಶಾಲೆಯ ಆವರಣದಲ್ಲಿ 50 ಅಡಿ ಎತ್ತರದ ರಾವಣನ ಪ್ರತಿಕೃತಿ ದಹನ ಮಾಡಲಾಯಿತು. ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಮಹಿಳೆಯರು ಹಾಗೂ ಪುರುಷರಿಗೆ ಕುಳಿತುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.

ನೆಹರೂ ಸ್ಟೇಡಿಯಂ ರಸ್ತೆಯಲ್ಲಿ ಸಂಚಾರ ಒತ್ತಡ ಹೆಚ್ಚಾದ ಕಾರಣ ವಾಹನ ಮಾರ್ಗಗಳನ್ನು ಬದಲಾವಣೆ ಮಾಡಲಾಗಿತ್ತು. ವಿಶೇಷ ಪೊಲೀಸ್‌ ಕಾರ್ಯಪಡೆ, ಜಿಲ್ಲಾ ಸಶಸ್ತ್ರಪಡೆ, ಮಹಿಳಾ ಪೊಲೀಸರು ಬಂದೋಬಸ್ತ್‌ ಮಾಡಿದ್ದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ

ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ...

More Articles Like This

error: Content is protected !!
Join WhatsApp Group