ಗುರುವಿನ ಸ್ಮರಣೆ ಎಲ್ಲರಿಗೂ ಅವಶ್ಯಕ – ಗಜಾನನ ಮನ್ನಿಕೇರಿ

Must Read

ಮೂಡಲಗಿ: ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ ಎಂದು ಧಾರವಾಡದ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.

ತಾಲೂಕಿನ ಕುಲಗೋಡ ಕೇಳಕರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ ಸನ್ 2002-03 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಂದೆ-ತಾಯಿ ಹಾಗೂ ಗುರುವಿನ ಸ್ಮರಣೆ ಮಾಡುವುದರಿಂದ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಹೊರಹೊಮ್ಮುತ್ತಾರೆ. ಹೀಗಾಗಿ ಗುರುವಿನ ಸ್ಮರಣೆ ಮಾಡುವುದು ಅವಶ್ಯಕವಾಗಿದೆ ಎಂದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಮೂಡಲಗಿ ವಲಯದಲ್ಲಿಯೇ ಕುಲಗೋಡ ವಲಯ ಶೈಕ್ಷಣಿಕವಾಗಿ ಹೆಚ್ಚು ಪ್ರಗತಿಯಾಗಿರುವುದು ಸಂತಸ ತಂದಿದೆ ಎಂದರು.

ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡಿ, ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದರ ಜೊತೆಗೆ ಎಲ್ಲ ಸ್ನೇಹಿತರನ್ನು ಭೇಟಿ ಮಾಡಿ ಕುಶಲೋಪರಿ ಹಂಚಿಕೊಳ್ಳುವುದು ಒಳ್ಳೆಯ ಬೆಳವಣಿಗೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಂಬಂಧ ಎನ್ನುವುದು ಮರಿಚಿಕೆಯಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಲರನ್ನು ಕೂಡಿಸಿ ಕುಶಲೋಪರಿ ಹಂಚಿಕೊಳ್ಳುವುದು ಸಂತಸ ಮೂಡಿಸಿದೆ ಎಂದರು.

ಶಿಕ್ಷಕರಾದ ವ್ಹಿ.ಯು.ರಡ್ಡೇರಟ್ಡಿ, ಹಳೆ ವಿದ್ಯಾರ್ಥಿಗಳಾದ ಹಣಮಂತ ಚನ್ನಾಳ, ಸತೀಶ ಚಂದರಗಿ, ರಂಜನಾ ಯಕ್ಸಂಬಿ ಅನಿಸಿಕೆ ಹಂಚಿಕೊಂಡರು.

ನಿವೃತ್ತ ದೈಹಿಕ ಶಿಕ್ಷಕರು ಹಾಗೂ ಹಿರಿಯರಾದ ಎಸ್.ಬಿ.ಶಿಂಧೆ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯ ಎಲ್.ಆರ್.ಭಜಂತ್ರಿ ವಹಿಸಿದ್ದರು.

ಸಂಸ್ಥೆಯ ಅಧ್ಯಕ್ಷ ಎಸ್.ಜಿ.ಪಂಡಿತ, ಶಿಕ್ಷಕರಾದ ಜಿ.ಎಸ್.ಗಾಣಿಗೇರ, ಎಸ್.ಎ.ಮುತ್ತೆನ್ನವರ, ಎಸ್.ಆರ್.ಕೆಳಗಡೆ, ಟಿ.ಬಿ.ದೇವರ, ಎಲ್.ಕೆ.ಹೊಸಮನಿ, ಬಿ.ಎಲ್.ಜೊತೆನ್ನವರ, ಬಿ.ವೈ.ಭಜಂತ್ರಿ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಸಚೀನ ಬಾರ್ಕಿ ಸ್ವಾಗತಿಸಿದರು. ಮಹಾದೇವ ಪೂಜೇರಿ ಪ್ರಾಸ್ತಾವಿಕ ಮಾತನಾಡಿದರು. ಸಂಗಪ್ಪ ಪೆಟ್ಲೂರ ಮತ್ತು ಜಯಶ್ರೀ ಅವಟಿಮಠ ನಿರೂಪಿಸಿದರು. ಗಾಳೆಪ್ಪ ಹೆಗಡೆ ವಂದಿಸಿದರು.

Latest News

ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ

ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ...

More Articles Like This

error: Content is protected !!
Join WhatsApp Group