ಆನಂದ ಮಾಮನಿ ಅವರಿಗೆ ಶ್ರದ್ಧಾಂಜಲಿ

Must Read

ಗೋಕಾಕ– ಶನಿವಾರ ತಡರಾತ್ರಿ ಅಗಲಿದ ವಿಧಾನ ಸಭೆ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ದಿ. ಆನಂದ ಮಾಮನಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಅರಭಾವಿ ಬಿಜೆಪಿ ಮಂಡಳ ಅಧ್ಯಕ್ಷ ಮಹಾದೇವ ಶೆಕ್ಕಿ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಸಿಪಿ ಯಕ್ಸಂಬಿ, ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಎಸ್ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಎಸ್ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಅಡಿವೆಪ್ಪ ಕಂಕಾಳಿ,ಕುಮಾರ ಪೂಜೇರಿ, ಅಡಿವೆಪ್ಪ ಭಂಗಿ, ಭರಮಪ್ಪ ಪಾಶ್ಚಾಪೂರ, ಶ್ರೀಶೈಲ ಗಡಾದ,ಅಲೆಮಾರಿ ಜನಾಂಗದ ಜಿಲ್ಲಾ ಅಧ್ಯಕ್ಷ ಅಮೃತ ದಪ್ಪಿನವರ, ಭೀಮಶಿ ಪಾತ್ರೂಟ, ಸಿದ್ದು ದುರದುಂಡಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಿ.ಮಾಮನಿ ಅವರ ನಿಧನಕ್ಕೆ ಒಂದು ನಿಮಿಷ ಮೌನ ಆಚರಿಸಿ ಶಾಂತಿ ಕೋರಲಾಯಿತು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group