ಬೀದರ – ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಷ್ಟ್ರೀಯ ಹೆದ್ದಾರಿ 65 ತಡೆದು ಪ್ರತಿಭಟನೆ ಮಾಡಲಾಯಿತು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ನಿರತ 34 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದರು.
ರಾಜ್ಯದಲ್ಲಿ ಅತ್ಯಂತ ಕಡಿಮೆ ಹಣ ಬೀದರ್ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ನೀಡುತ್ತಿವೆ ಕೂಡಲೆ ಸರ್ಕಾರ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಧರಣಿ ನಿರತ ರೈತರು ಆಗ್ರಹಿಸಿದರು. ಕೆಲ ಕಾಲ ಪ್ರತಿಭಟನೆ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಿ ವಾಹನ ಚಾಲಕರು ಪರದಾಡುವಂತಾಯಿತು.
ಹುಮನಾಬಾದ್ ಪೊಲೀಸರಿಂದ ರೈತರ ಬಂಧನ ನಂತರ ಬಿಡುಗಡೆ ಮಾಡಲಾಯಿತು.
ವರದಿ: ನಂದಕುಮಾರ ಕರಂಜೆ, ಬೀದರ