spot_img
spot_img

ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

- Advertisement -

ಗೋಕಾಕ: 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು.

ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಬಾವುಟಗಳನ್ನು ವಿತರಿಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೂಡಲಗಿ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮೂಡಲಗಿ ಪುರಸಭೆ ಮಾಜಿ ಸದಸ್ಯ ಮರೆಪ್ಪ ಮರೆಪ್ಪಗೋಳ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group