ಕೊಲೆ, ಅತ್ಯಾಚಾರಗಳು ಹೆಚ್ಚುತ್ತಿರುವುದು ಖೇದಕರ – ವೈ ಸಿ ಮಯೂರ

Must Read

ಸಿಂದಗಿ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ, ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಜಗತ್ತಿಗೆ ಮಾದರಿಯಾಗುವ ಸಂವಿಧಾನ ಭಾರತದಲ್ಲಿದ್ದರೂ ಕೂಡಾ ದಿನೇ ದಿನೇ ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಖೇದಕರ ಸಂಗತಿ ಡಿಎಸ್ಎಸ್ ಜಿಲ್ಲಾ ಸಂಚಾಲಕ ವೈಸಿ ಮಯೂರ ಹೇಳಿದರು.

ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿದ್ದು, ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಇದಕ್ಕೆ ನಿದರ್ಶನ ಎಂಬಂತೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಿನ್ನೆ ಕಾಮುಕ ಪಿಶಾಚಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಡಿಎಸ್‍ಎಸ್ ಜಿಲ್ಲಾ ಶಾಖೆ ಉಗ್ರವಾಗಿ ಖಂಡಿಸುತ್ತದೆ ಎಂದರು.

ಸರಕಾರ ಅತ್ಯಾಚಾರಿಯನ್ನು ಹೈದರಾಬಾದ ಮಾದರಿಯಲ್ಲಿ ಎನ್-ಕೌಂಟರ ಮಾಡಬೇಕು ಮತ್ತು ಬಾಲಕಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಸದರಿ ಬಾಲಕಿಯ ಕುಟುಂಬಕ್ಕೆ ರೂ. 50,00,000/- ಪರಿಹಾರ ನೀಡಬೇಕೆಂದು ಡಿಎಸ್‍ಎಸ್ ಜಿಲ್ಲಾ ಸಂಚಾಲಕ ವೈ ಸಿ ಮಯೂರ ಆಗ್ರಹಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group