ಶೀಘ್ರವೇ ವೇತನ ಆಯೋಗದ ರಚನೆ: ಬೀರಪ್ಪ ಅಂಡಗಿ ಚಿಲವಾಡಗಿ ಸ್ವಾಗತ

Must Read

ಕೊಪ್ಪಳ: ರಾಜ್ಯ ಸರಕಾರಿ ನೌಕರರ ಆಶಯದಂತೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ವೇತನ ಆಯೋಗದ ರಚನೆಯ ಕುರಿತಾಗಿ ನಿರ್ಧಾರ ತಿಳಿಸಿದ್ದಾರೆ ಹಾಗೇ ನುಡಿದಂತೆ ವೇತನ ಆಯೋಗದ ರಚನೆಗೆ ಮುಂದಾಗ ಮುಖ್ಯಮಂತ್ರಿ ನಡೆಯನ್ನು ಸ್ವಾಗತಿಸಿ,ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇದರ ಜೊತೆಯಲ್ಲಿ ಮುಖ್ಯಮಂತ್ರಿಗಳು ವೇತನ ಆಯೋಗದ ರಚನೆಯ ಮಾಡಲು ಮುಂದಾಗಲು ಶ್ರಮಿಸಿದ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಹಾಗೂ ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೂ ಕೂಡಾ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅಭಿನಂದನೆಗಳು ತಿಳಿಸಿದ್ದಾರೆ.

ಈ ವಿಷಯದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ವೇತನ ಆಯೋಗವು ಶೀಘ್ರದಲ್ಲೇ ರಚನೆಯಾಗಿ ವರದಿ ನೀಡುವುದರ ಮೂಲಕ‌ ಸರಕಾರಿ ನೌಕರರಿಗೆ ಅನುಕೂಲ ಮಾಡಿ ಮಾಡಿಕೊಡಲಿ ಇದರ ಜೊತೆಯಲ್ಲಿ ಈಗಾಗಲೇ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ನಿರ್ಧಾರದಂತೆ ವೇತನ ಆಯೋಗದ ಕಾರ್ಯ ಮುಗಿದ ತಕ್ಷಣ ರಾಜ್ಯ ಸರಕಾರಿ ನೌಕರರಿಗೆ ಮರಣ ಶಾಸನವಾಗಿ ಪರಿಗಣಿಸಿರುವ ಎನ್.ಪಿ.ಎಸ್.ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಚನೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಹಮ್ಮಿಕೊಳ್ಳಬೇಕಾಗಿರುವ ಹೋರಾಟದ ರೂಪರೇಷವನ್ನು ಹಾಕಿಕೊಳ್ಳುವುದರ ಮೂಲಕ ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ಬರುವ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರು ಗಮನಹರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group