ಡಿಕೆಶಿ, ರಾಹುಲ್ ರಂಥವರು ಭ್ರಷ್ಟಾಚಾರದ ಬಗ್ಗೆ ಮಾತಾನಾಡೋದು ವಿಚಿತ್ರ – ಮುನೇನಕೊಪ್ಪ

Must Read

ಬೀದರ – ಡಿಕೆ ಶಿವಕುಮಾರ ಹಾಗೂ ರಾಹುಲ್ ಗಾಂಧಿಯಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ವಿಚಿತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಲೇವಡಿ ಮಾಡಿದರು.

ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್ ಮೇಲೆ ಯಾವ ರೀತಿ ಕೇಸ್ ಗಳು ಇವೆ ಎಂದು ನಮಗೆಲ್ಲಾ ಗೊತ್ತಿದೆ.

ಡಿಕೆ ಶಿವಕುಮಾರ್ ಹಾಗೂ ರಾಹುಲ್ ಗಾಂಧಿಯಂಥವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಅಂದರೆ ಏನು ಹೇಳಬೇಕು. ಇವತ್ತು ಈ ದೇಶದ ಜನರು ಬಹಳ ಜಾಗೃತರಾಗಿದ್ದಾರೆ. ಕಾಂಗ್ರೆಸ್ ಇಡೀ ದೇಶದಲ್ಲೇ ತಿರಸ್ಕೃತವಾಗಿರುವ ಪಾರ್ಟಿ. ಅದನ್ನು ಮುಚ್ಚಲು ಕಾಂಗ್ರೆಸ್ ನಾಯಕರು ಭಾರತ್ ಜೋಡೋಗೆ ಹೋಗುತ್ತಿದ್ದಾರೆ. ಈ ಜೋಡೋಗು ಇಂದು ಸ್ಪಂದನೆ ಸಿಗುತ್ತಿಲ್ಲಾ ಎಂದರು.

ನಿಗಮ ಮಂಡಳಿಗಳಲ್ಲಿ ಪಕ್ಷ ನಿಷ್ಠರಿಗೆ ಸ್ಥಾನ ನೀಡುತ್ತಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ ಹೀಗಾಗೀ ಸಿಎಂ ಹಾಗೂ ಪಕ್ಷದ ಹಿರಿಯ ನಾಯಕರು ಸೇರಿ ತೀರ್ಮಾನ ಮಾಡುತ್ತಾರೆ ಎಂದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group