ಭಾರತ ದೇಶದ ಅಡಿಪಾಯ ಸಂವಿಧಾನವಾಗಿದೆ – ಫಾ.ಅಲ್ವಿನ್

0
294

ಸಿಂದಗಿ: ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಮತ್ತು ವಿಶೇಷ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಮಂಡಿಸಿದ ಬೇಡಿಕೆಗಳನ್ನು ನೇರವೇರಿಸುವುದು ಸ್ಥಳೀಯ ಸರಕಾರವಾದ ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಸಂಗಮ ಸಂಸ್ಥೆ ನಿರ್ದೇಶಕರಾದ ಫಾದರ್ ಆಲ್ವಿನ್ ಡಿ,ಸೋಜ ಹೇಳಿದರು.

ತಾಲೂಕಿನ ಬ್ಯಾಕೋಡ ಗ್ರಾಮದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ  ಹಾಗೂ  ಗ್ರಾಮ ಪಂಚಾಯತ್ ಬ್ಯಾಕೋಡ  ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ  ವಿಶೇಷ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ನಮ್ಮ  ದೇಶದ ಭವಿಷ್ಯಕ್ಕೆ ಸಂವಿಧಾನ ದೊಡ್ಡ ಅಡಿಪಾಯವಾಗಿದೆ. ಸಂವಿಧಾನದ ಮೇಲೆ ನಂಬಿಕೆ ಇಡಬೇಕು. ಸರಕಾರಿ ಶಾಲೆಯಲ್ಲಿ ಶಿಕ್ಷಕರು ಉತ್ತಮ ರೀತಿಯಲ್ಲಿ  ಶಿಕ್ಷಣ ನೀಡಬೇಕು ಎಂದರು.

ಗ್ರಾಮ ಪಂಚಾಯತಿಯ ಕಾರ್ಯದರ್ಶಿ ರಮೇಶ ಚಟ್ಟರಕಿ  ಮಾತನಾಡಿ, ಮಕ್ಕಳು ಮಂಡಿಸಿದ ಬೇಡಿಕೆಗಳನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸಾಧ್ಯವಾದಷ್ಟು ಮಟ್ಟಿಗೆ ಅತೀ ಶೀಘ್ರದಲ್ಲಿ ಬೇಡಿಕೆಗಳನ್ನು ಪೂರೈಸುತ್ತೇವೆ. ಕೆಲವೊಂದು ಕಾಮಗಾರಿಗಳಿಗೆ ಈಗಾಗಲೇ ಅನುವೊದನೆಯನ್ನು ಜಿಲ್ಲಾ ಮುಖ್ಯ ಕಾರ್ಯದರ್ಶಿಗಳಿಂದ ಪಡೆಯಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಂಗಮ ಸಂಸ್ಥೆಯ ಸಹ ನಿರ್ದೇಶಕರಾದ ಸಿ. ಸಿಂತಿಯಾ ಡಿಮೆಲ್ಲೊ ಪ್ರಾಸ್ಥಾವಿಕವಾಗಿ ಮಾತನಾಡಿದರು. ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸರಸ್ವತಿ ಚೊರಗಸ್ತಿ  ನಿರೂಪಿಸಿದರು, ಕುಮಾರಿ ಸೃಷ್ಠಿ ಹರನಾಳ ಸ್ವಾಗತಿಸಿದರು. ಕುಮಾರಿ ತನುಜಾ ಕೊಟ್ಯಾಳ ವಂದಿಸಿದರು.

ಅಂತರಗಂಗಿ ಸರಕಾರಿ ಶಾಲೆಯ ಮುಖ್ಯ ಗುರುಗಳು, ಮಾಡಬಾಳ ಸರಕಾರಿ ಶಾಲೆಯ ಮುಖ್ಯ ಗುರುಗಳು, ಬನ್ನೆಟ್ಟಿ ಸರಕಾರಿ ಶಾಲೆಯ ಮುಖ್ಯ ಗುರುಗಳು, ಗ್ರಾಮ ಪಂಚಾಯತಿಯ ಅದ್ಯಕ್ಷರು, ಸಂಗಮ ಸಂಸ್ಥೆಯ ಕಾರ್ಯಕರ್ತರಾದ ರಾಜೀವ ಕುರಿಮನಿ ಹಾಗೂ ಬ್ರದರ್ ನೊಯೇಲ್ ಹಾಜರಿದ್ದರು.