spot_img
spot_img

ಬೂದಿಹಾಳ ಪ್ರೌಢಶಾಲೆಗೆ ಹೈಕೋರ್ಟ್ ಹಿರಿಯ ನ್ಯಾಯವಾದಿ ಭೇಟಿ

Must Read

spot_img
- Advertisement -

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಹೈಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಮಲ್ಲಿಕಾರ್ಜುನ ಜಿ. ಕಂಟ್ರಾಕ್ಟರ್ ಭೇಟಿ ನೀಡಿದರು. ಶಾಲೆಯ ಪರಿಸರ, ಮಕ್ಕಳ ಸ್ಪಂದನೆ, ಸಿಬ್ಬಂದಿಯ ತಂಡಕಾರ್ಯದ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆಯ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ಆಪ್ತ ಸಲಹಾ ಕೇಂದ್ರದ ವತಿಯಿಂದ ಹಮ್ಮಿಕೊಂಡ ಕಾನೂನು ಅರಿವು ಕಾರ್ಯಾಗಾರ, ವೃತ್ತಿ ಮಾರ್ಗದರ್ಶನ ಉಪನ್ಯಾಸ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು, ವಿವಿಧ ನಿಯಮಗಳ ಬಗ್ಗೆ ಮಾಹಿತಿ‌ ನೀಡಿದರು. ಜೀವನದಲ್ಲಿ ಹಣ, ಆಸ್ತಿಗಿಂತ ನೆಮ್ಮದಿ, ಶಾಂತಿ ಮುಖ್ಯ. ಬದುಕಿನ ಪ್ರತಿ ಕ್ಷಣವನ್ನು ಸಾರ್ಥಕತೆಯ ಪ್ರತಿಬಿಂಬದಂತೆ ಕಾಣಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದಾವಣಗೆರೆಯ ನೂತನ ಶಿಕ್ಷಣ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿಯಾದ ಜ್ಯೋತಿ ಎಂ.ಕಂಟ್ರಾಕ್ಟರ ಇಂಗ್ಲಿಷ್ ಕಲಿಯಲು ಅಗತ್ಯವಿರುವ ಸರಳವಾದ ವಿವಿಧ ತಂತ್ರಗಳನ್ನು ಪರಿಚಯ ಮಾಡಿಕೊಟ್ಟರು. ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಿ ಹೊರಹೊಮ್ಮಬೇಕು ಎಂದು ಅವರು ಹೇಳಿದರು.

- Advertisement -

ಮುಖ್ಯ ಅತಿಥಿಗಳಾದ ಲೀಡ್ ಸಾಪ್ಟವೇರ ಇಂಜಿನಿಯರ್ ಪ್ರಮೋದ ಹರ್ಲಾಪೂರ ಮಾತನಾಡಿ ಆತ್ಮವಿಶ್ವಾಸ ಮತ್ತು ಸಹನೆ ಯಶಸ್ಸಿನ ಮೂಲಮಂತ್ರಗಳು ಎಂದು ಹೇಳಿದರು. ಎಸ್.ಎಸ್. ಎಲ್.ಸಿ ನಂತರದ ವಿವಿಧ ಕೋರ್ಸಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮೀಣ ಪ್ರತಿಭೆಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಲಿ ಎಂದು ಅವರು ಆಶಯ ವ್ಯಕ್ತಪಡಿಸಿದರು. ಮಾನವ ಸಂಪನ್ಮೂಲ ಸಲಹಾಗಾರ್ತಿಯಾದ ತೇಜಸ್ವಿನಿ ಹರ್ಲಾಪೂರ ಮಾತನಾಡಿ ಶಿಕ್ಷಣ ಸ್ವಾವಲಂಬನೆಯ ದಾರಿ ತೋರಬೇಕು ಎಂದರು. ವಿವಿಧ ಅವಕಾಶಗಳನ್ನು ಬಳಸಿಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ ಮಾತನಾಡಿ ದೂರದಿಂದ ಆಗಮಿಸಿ ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು ಆಪ್ತವಾಗಿ ಸಂವಾದ ನಡೆಸಿದ್ದು ಮಕ್ಕಳಿಗೆ ಪ್ರೇರಣೆ ನೀಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ರೇಖಾ ಸೊರಟೂರ, ಅಡುಗೆ ಸಿಬ್ಬಂದಿಗಳಾದ ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಉಪಸ್ಥಿತರಿದ್ದರು. ಶಿಕ್ಷಕರಾದ ಶಿವಾನಂದ ಬಳಿಗಾರ ಅತಿಥಿಗಳ ಪರಿಚಯ ಮಾಡಿಕೊಟ್ಟರು.ತನುಜಾ ಬಡಿಗೇರ ಪ್ರಾರ್ಥಿಸಿದರು. ರಾಜೇಶ್ವರಿ  ಸೊಗಲದ ಸ್ವಾಗತಿಸಿದರು. ಚೈತ್ರಾ ಸೊಗಲದ ನಿರೂಪಿಸಿದರು. ಮಲ್ಲಮ್ಮ ಅಳಗೋಡಿ ವಂದಿಸಿದರು.

- Advertisement -
- Advertisement -

Latest News

೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ ಕ್ರೀಡಾಕೂಟ 

ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...
- Advertisement -

More Articles Like This

- Advertisement -
close
error: Content is protected !!
Join WhatsApp Group