ಕ್ಷೇತ್ರದ ಅಭಿವೃದ್ಧಿ ಯಲ್ಲಿ ಬಾಲಚಂದ್ರ ಜಾರಕಿಹೊಳಿ ಕೊಡುಗೆ ಅಪಾರ

Must Read

ಗೋಕಾಕ– ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೊಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು.

ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ ಎಂದು ಹೇಳಿದರು.

ಕೌಜಲಗಿ- ಮನ್ನಿಕೇರಿ ರಸ್ತೆ ಸುಧಾರಣೆಗೆ ೮ ಕೋ. ರೂ ಗಳ ಅನುದಾನವನ್ನು ಮಂಜೂರು ಮಾಡಿಸಿದ್ದಾರೆ. ಜನವರಿ ತಿಂಗಳ ಅಂತ್ಯದಲ್ಲಿ ಈ ಕಾಮಗಾರಿ ಮುಗಿಯಲಿದೆ. ಇದರಿಂದ ಉಭಯ ಗ್ರಾಮಗಳ ಮಧ್ಯ ರಸ್ತೆ ಸಂಚಾರ ಯಾವುದೇ ಅಡಚಣೆ ಇಲ್ಲದೇ ಸಾಗಲಿದೆ. ಉತ್ತಮ ಗುಣಮಟ್ಟದ ರಸ್ತೆ
ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಮನ್ನಿಕೇರಿ ಗ್ರಾ. ಪಂ. ಅಧ್ಯಕ್ಷ ಬಾಳಪ್ಪ ಗೌಡರ ಹಾಗೂ ಕೌಜಲಗಿ ಗ್ರಾ.ಪಂ. ಅಧ್ಯಕ್ಷೆ ಜೈಬನಬೀ ನಗಾರ್ಚಿ ಅವರು ಕೌಜಲಗಿ- ಮನ್ನಿಕೇರಿ ನಡುವಿನ ೫ ಕಿ.ಮೀ. ರಸ್ತೆ  ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮಿಗಳು,  ಶಾಸಕರ ಆಪ್ತ ಸಹಾಯಕ ಸಿ.ಪಿ.ಯಕ್ಸಂಬಿ,  ಮನ್ನಿಕೇರಿ ಗ್ರಾ.ಪಂ.ಮಾಜಿ ಅಧ್ಯಕ್ಷ ಮುದುಕಪ್ಪ ಗೋಡಿ, ಪಾಂಡುರಂಗ ಪಾಟೀಲ್, ಸುಭಾಸ ಕೌಜಲಗಿ, ಪುಂಡಲೀಕ ದಳವಾಯಿ, ಮಹಾಂತೇಶ ಮೆಟ್ಟಿನ, ಮುತ್ತಪ್ಪ ನಾವಿ, ಎರಡೂ ಗ್ರಾಮಗಳ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group