ಧಾರವಾಡ: ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಬ್ಬರು ಅಥವಾ ಮೂವರು ಸಾಧಕಿಯರನ್ನು ಗುರುತಿಸಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರವರ 2023 ರ ಸಾಲಿನ ಪ್ರಶಸ್ತಿಯನ್ನು ನೀಡುತ್ತಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ದಲಿತ ವಿದ್ಯಾರ್ಥಿ ಪರಿಷತ್ ಕೊಡಮಾಡುವ ಈ ಸಾಲಿನ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಧಾರವಾಡ ಜಿಲ್ಲೆಯಿಂದ ಮೂರು ಜನ ಮಹಿಳಾ ಸಾಧಕಿಯರು ಆಯ್ಕೆಯಾಗಿದ್ದಾರೆ.
ಸಮಾಜ, ಸಾಹಿತ್ಯ ಹಾಗೂ ಶೈಕ್ಷಣಿಕ ಸೇವೆ ಮೂಲಕ ಗುರುತಿಸಿಕೊಂಡಿರುವ ಗಾಯತ್ರಿ ಹೆಗ್ಗೋಡು, ಡಾ. ಜಯಶ್ರೀ ಆನಂದ ದೇಶಮಾನ್ಯ, ಹಾಗೂ ಗೌರಮ್ಮ ದೊಡ್ಡಮನಿ ಇವರು ಈ ಸಾಲಿನ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರಿಗೆ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಅಂಗವಾಗಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಧಾರವಾಡ ಜಿಲ್ಲಾ ಸಂಚಾಲಕರಾದ ಹನುಮಂತ ದಾಸರ, ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಹಾಸಟ್ಟಿ, ಮಹಿಳಾ ಸಂಚಾಲಕಿಯಾದ ದುರ್ಗಾ.ಎಚ್, ಹಾಗೂ ಮಹಿಳಾ ಪ್ರಧಾನ ಕಾರ್ಯದರ್ಶಿಗಳಾದ ಸರೋಜಾ ಎಸ್. ಕೊಟ್ಟೂರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.