ಸಿಂದಗಿ: ಗಡಿ ಕಾಯುವ ಯೋಧ, ದೇಶಕ್ಕೆ ಅನ್ನ ನೀಡುವ ರೈತರನ್ನು ನಾವೆಂದೂ ಮರೆಯಬಾರದು ಏಕೆಂದರೆ ನಾವೆಲ್ಲ ಸಿಟಿಗಳಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದೇವೆ ಎಂದರೆ ಈ ಇಬ್ಬರು ಮಾಡುವ ಋಣದಿಂದ ಎನ್ನುವುದನ್ನು ಯಾರು ಮರೆಯುವಂತಿಲ್ಲ ಎಂದು ಎಂದು ಸಿ.ಎಮ್. ಮನಗೂಳಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಪಾಟೀಲ ಹೇಳಿದರು.
ಪಟ್ಟಣದ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಬಿ.ಕಾಂ ವಿದ್ಯಾರ್ಥಿಗಳು ಏರ್ಪಡಿಸಿದ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅನ್ನವನ್ನು ದೇವರು ಎನ್ನುವ ಸಂಸ್ಕೃತಿ ನಮ್ಮದು. ಅನ್ನವನ್ನು ಹಾಳು ಮಾಡದೆ ಸರಿಯಾದ ವ್ಯವಸ್ಥೆಯಲ್ಲಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಬಿ.ಪಿ. ಕರ್ಜಗಿ ಮಾತನಾಡಿದರು.
ಸಂಸ್ಥೆಯ ಆಡಳಿತಾಧಿಕಾರಿ ಐ.ಬಿ. ಬಿರಾದಾರ, ಹಿರಿಯರಾದ ಪಿ.ಎಮ್. ಮಡಿವಾಳರ, ಪದವಿ ಕಾಲೇಜಿನ ಪ್ರಾಚಾರ್ಯ ಜಿ.ಎಸ್. ಕಡಣಿ, ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಬಿ. ಗೋಡಕರ ಉಪಸ್ಥಿತರಿದ್ದರು.