ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು- ಸರ್ವೋತ್ತಮ ಜಾರಕಿಹೊಳಿ

Must Read

ಮೂಡಲಗಿ: ಮನುಷ್ಯನಿಗೆ ಶರೀರ ಸದೃಢರಾಗಬೇಕಾದರೆ ಆಹಾರ ಎಷ್ಟು ಮುಖ್ಯವೋ ಅಷ್ಟೇ ಮನಸ್ಸು ಸದೃಢರಾಗ ಬೇಕಾದರೆ ಯುವಕರು ಅಧ್ಯಾತ್ಮದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಅವರು ಮಂಗಳವಾರದಂದು ತಾಲೂಕಿನ ಹುಣಶ್ಯಾಳ ಪಿಜಿಯ  ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ 24ನೇ ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶ್ರೀಮಠದ ನಿಜಗುಣ ದೇವರಲ್ಲಿ ಸಹೋದರತ್ವ ಭಾವನೆಯಿದೆ. ಅವರ ಜ್ಞಾನದ ಆಶೀರ್ವಾದ ನಾವೆಲ್ಲರೂ ಪಡೆದುಕೊಂಡು ಪುಣ್ಯವಂತರಾಗಬೇಕು. ದುಡ್ಡು ಕೊಟ್ಟರೆ ಜಮೀನು ಸಿಗುತ್ತದೆ ಆದರೆ ಪ್ರೀತಿ ಮತ್ತು ಸಹೋದರತ್ವದ ವಿಚಾರಗಳನ್ನು ಬೆಳೆಸಿಕೊಂಡು ಮಠಮಾನ್ಯಗಳ ಕಾರ್ಯಕ್ರಮಗಳಲ್ಲಿ ಯುವಜನತೆ ಪಾಲ್ಗೊಳ್ಳಬೇಕು. ಯುವ ಜನತೆ ಪುಣ್ಯಮಯ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು. ಅಹಂಕಾರವನ್ನು ಬಿಟ್ಟು ಸಹೋದರತ್ವ ಭಾವನೆ ಬೆಳೆಸಿಕೊಳ್ಳಬೇಕು. ಶ್ರೀ ಮಠವು ಧಾರ್ಮಿಕ ಕಾರ್ಯಕ್ರಮವನ್ನು ಮಾಡುತ್ತಾ ನಾಡಿನ ಸಮಸ್ತ ಭಕ್ತವೃಂದಕ್ಕೆ ಸಹಾಯ ಸಹಕಾರ ನೀಡುತ್ತಾ ಬಂದಿದೆ. ಅವರ ಜೊತೆಗೆ ನಮ್ಮ ಜಾರಕಿಹೊಳಿ ಮನೆತನವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಸವಾನಂದ ಭಾರತಿ ಸ್ವಾಮೀಜಿ, ಚಿದಾನಂದ ಸ್ವಾಮೀಜಿ, ಸಿದ್ದಾನಂದ ಸ್ವಾಮೀಜಿ, ತೊಂಡಿಕಟ್ಟಿಯ ವೆಂಕಟೇಶ ಮಹಾರಾಜರು, ಬೀದರನ ಗಣೇಶಾನಂದ ಮಹಾರಾಜರು, ಶರೀಫ ಶಿವಯೋಗಿಗಳು ಸೇರಿದಂತೆ ಇತರರು ಇದ್ದರು. ಶ್ರೀಮಠದ ವತಿಯಿಂದ ದಾನಿಗಳಿಗೆ,ಗಣ್ಯರಿಗೆ, ಪೂಜ್ಯರಿಗೆ ಸನ್ಮಾನಿಸಲಾಯಿತು.

ಗುರುನಾಥ ಶಾಸ್ತ್ರೀ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ವಿಜಯಪೂರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿ ನಿಧನದ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group