- Advertisement -
ಮೂಡಲಗಿ: ನುಡಿದಂತೆ ನಡೆದ ನಡೆದಾಡುವ ದೇವರು ವಿಜಯಪುರ ಜ್ಞಾನ ಯೋಗಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ. ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.
ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ತಮ್ಮ ಪ್ರವಚನಗಳ ಮೂಲಕ ಜಗದೋದ್ಧಾರಕ್ಕಾಗಿ ಶ್ರಮಿಸಿದ ಅವರ ಸೇವೆ ಅಮೋಘವಾದದ್ದು. ಶ್ರೀಗಳ ಅಗಲಿಕೆ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ. ಪೂಜ್ಯರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆಂದು ಸಂಸದ ಈರಣ್ಣ ಕಡಾಡಿ ಸಂತಾಪ ಸೂಚಿಸಿದರು.