spot_img
spot_img

ವಸತಿ ಯೋಜನೆಗಳ ಸಹಾಯಧನ ಹೆಚ್ಚಳ – ಈರಣ್ಣ ಕಡಾಡಿ ಮಾಹಿತಿ

Must Read

- Advertisement -

ಮೂಡಲಗಿ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಬಸವ, ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಈಗಿರುವಂತಹ ಸಹಾಯಧನದ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.

ಗುರುವಾರ ಜ.05 ರಂದು ಪತ್ರಿಕಾ ಹೇಳಿಕೆ ನೀಡಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವಸತಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಕ್ಕೆ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಿಸಲು ಸರ್ಕಾರ ಬಜೆಟ್‍ನಲ್ಲಿ ಘೋಷಿಸಲಿದೆ ಎಂದರು.

ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮನೆ ನಿರ್ಮಿಸಲು ಕಚ್ಚಾ ವಸ್ತುಗಳ ಬೆಲೆ ಹಾಗೂ ಕಾರ್ಮಿಕರ ವೇತನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಒಂದೇ ತರನಾಗಿದ್ದು, ನಗರ ಮತ್ತು ಗ್ರಾಮೀಣ ಎಂಬ ಭೇದಭಾವ ಮಾಡದೆ ನಗರ ಮತ್ತು ಗ್ರಾಮೀಣ ಎರಡು ಪ್ರದೇಶಗಳಿಗೆ ಸಮನಾಗಿ ಸಹಾಯಧನವನ್ನು ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆಂದು ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.

- Advertisement -
- Advertisement -

Latest News

ಮನೋಜ್ಞ ಅನುಭೂತಿಯ ವಿಶ್ವ ಧ್ಯಾನದ ದಿನಾಚರಣೆ 

      ಮೈಸೂರಿನ ಮಾನಸಗಂಗೋತ್ರಿಯು ಇಂದು ಮನಸ್ಸನ್ನು ಮುದಗೊಳಿಸುವ ಅಪರೂಪದ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು. ವಿಶ್ವ ಸಂಸ್ಥೆಯು 21 ಡಿಸೆಂಬರ್ ವಿಶ್ವ ಧ್ಯಾನದ ದಿನವನ್ನಾಗಿ ಆಚರಿಸಲು...
- Advertisement -

More Articles Like This

- Advertisement -
close
error: Content is protected !!
Join WhatsApp Group