ಬೀದರ್ ನಲ್ಲಿ ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

Must Read

ಬೀದರ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ವಿಕ್ರಮ್ ಜಾಲಿಂದರ್ ಬಿರಾದಾರ (32), ಸಂಗಮೇಶ (6), ದರ್ಶನ (8), ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಲಂಜವಾಡ ಗ್ರಾಮದಲ್ಲಿ  ಈ ಘಟನೆ ನಡೆದಿದ್ದು ಆರ್ಥಿಕ ಸಂಕಷ್ಟ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆ ಜಮೀನಿನಲ್ಲಿ ತನ್ನ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಕ್ರಮ ಖಾಸಗಿ ಸಾಲ ಮಾಡಿ ರಾಶಿ ಯಂತ್ರ ಖರೀದಿಸಿದ್ದ ಇದರಲ್ಲಿ ಆರ್ಥಿಕ ಹಿನ್ನಡೆಯಾಗಿತ್ತು.ಈ ವಿಷಯಕ್ಕೆ ಮನೆಯಲ್ಲಿ ಗಲಾಟೆ ಮಾಡಿಕೊಂಡು ಮಕ್ಕಳನ್ನು ಕರೆದುಕೊಂಡು ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆನ್ನಲಾಗಿದೆ.

ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವಗಳನ್ನು ಭಾವಿಯಿಂದ ಹೊರತೆಗೆದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕಲಬುರಗಿ ವಿಮಾನ ನಿಲ್ದಾಣ ಸ್ತಬ್ಧ: ರಾಜ್ಯ ಸರಕಾರದ ಮೌನದಿಂದ ಅಭಿವೃದ್ಧಿಗೆ ಹಿನ್ನಡೆ

371 ಜೆ ವ್ಯಾಪ್ತಿಯ ವಿಮಾನ ನಿಲ್ದಾಣಕ್ಕೆ ಗ್ರಹಣ: ಜನಪ್ರತಿನಿಧಿಗಳ ಮೌನಕ್ಕೆ ಆಕ್ಷೇಪಇತ್ತೀಚೆಗಷ್ಟೇ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ...

More Articles Like This

error: Content is protected !!
Join WhatsApp Group