ರಸ್ತೆ ಸಂಚಾರಿ ನಿಯಮ ಪಾಲಿಸಿ ಜೀವ ಉಳಿಸಿಕೊಳ್ಳಿ: ಎಸ್ ಐ ಬಾಲದಂಡಿ

Must Read

ಮೂಡಲಗಿ: ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ  ಮಾಡುವುದರಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯುತ್ತವೆ ಎಂದು ಮೂಡಲಗಿ ಪಿ ಎಸ್ ಐ. ಎಚ್ ವಾಯ್ ಬಾಲದಂಡಿ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಮೂಡಲಗಿ ಪೋಲಿಸ್ ಠಾಣೆಯಿಂದ ಆಯೋಜಿಸಲಾಗಿದ್ದ ರಸ್ತೆ ಸಂಚಾರ ಸುರಕ್ಷಿತ ಸಪ್ತಾಹ ಕಾರ್ಯಕ್ರಮದಲ್ಲಿ ಸುರಕ್ಷತಾ ಸಾಧನಗಳಾದ ಹೆಲ್ಮೆಟ್, ಸೀಟಬೇಲ್ಟ್ ಗಳನ್ನು ಧರಿಸಬೇಕು. ರಸ್ತೆ ಸುರಕ್ಷತಾ ಸಪ್ತಾಹ ನಿಯಮಗಳನ್ನು  ಪಾಲಿಸಬೇಕು ಇದರಿಂದ ನಮ್ಮ ಜೀವನವನ್ನು ನಾವೇ ಕಾಪಾಡಿಕೊಳ್ಳುವಂತಾಗುತ್ತದೆ. ರಸ್ತೆ ಅಳವಡಿಸಿದ ಸೂಚನಾ ಫಲಕವನ್ನು ಗಮನಿಸಿ ವಾಹನ ಓಡಿಸಬೇಕು. 

ರಸ್ತೆಯಲ್ಲಿ ವಾಹನ ಚಲಿಸುವ ಪ್ರತಿಯೊಬ್ಬರಿಗೂ ಸುರಕ್ಷತಾ ಕ್ರಮಗಳು, ನಿಯಮಗಳ ಪಾಲನೆಯಿಂದ ಅಪಘಾತ ತಡೆಯಲು ಸಾಧ್ಯ ಎಂದರು. 

ಹೆಲ್ಮೆಟ್‌ ಧರಿಸಿ ಜೀವ ಉಳಿಸಿ:

ಅನೇಕ ಅಪಘಾತಗಳು ನಮ್ಮ ತಪ್ಪುಗಳಿಂದಲೇ ಆಗುತ್ತವೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬದವರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಬೈಕ್ ಇರುವ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಬೇಕು, ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ಸೂಚಿಸಿದರು.

ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವಾಗ ಎಚ್ಚರ ವಹಿಸಬೇಕು ಎಲ್ಲ ರೀತಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡಿರಬೇಕು ಎಂದು ಬಾಲದಂಡಿ ಹೇಳಿದರು. 

ಈ ಸಂದರ್ಭದಲ್ಲಿ  ಪೊಲೀಸ್‌ ಠಾಣೆಯ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು. 

ದ್ವಿಚಕ್ರ ವಾಹನ ಪರವಾನಗಿ ವಾಹನವನ್ನು ಚಲಾಯಿಸಬೇಕು ಎಂದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group