ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Must Read

ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ 74 ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು.

ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ,  ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರಿತು ಉತ್ತಮ ನಾಗರಿಕರಾಗಬೇಕು ಎಂದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ಇವರ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪಥಸಂಚಲನ ಎಲ್ಲ ಗಮನ ಸೆಳೆಯಿತು. ಸಂವಿಧಾನ, ಯೋಧರ ತ್ಯಾಗ,  ದೇಶಪ್ರೇಮದ ಕುರಿತು ಪೂಜಾ ಸೊಗಲದ, ಸುನೀತಾ ಚಿಲಮೂರ, ಸುಶ್ಮಿತಾ ಸೊಗಲದ ಮಾತನಾಡಿದರು. ಸಾಕ್ಷಿ ಹಿರೇಮಠ, ಸಾಕ್ಷಿ ನಾಗಣ್ಣವರ, ತನುಜಾ ಬಡಿಗೇರ ಹಾಗೂ 10 ನೆಯ ತರಗತಿಯ ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆಗಳನ್ನು ಹಾಡಿದರು.

ಐಶ್ವರ್ಯ ಕುಲಕರ್ಣಿ ಸ್ವಾಗತಿಸಿದರು. ಚೈತ್ರಾ ಸೊಗಲದ ನಿರೂಪಿಸಿದರು. ಸಾಕ್ಷಿ ಹಿರೇಮಠ ವಂದಿಸಿದರು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಸದಸ್ಯರಾದ ನಿರ್ಮಲಾ ಮೆಕ್ಕೇದ, ಶಿಕ್ಷಕರಾದ ಜಗದೀಶ ನರಿ, ಶ್ರೀಪಾಲ ಚೌಗಲಾ, ಸುನೀಲ ಭಜಂತ್ರಿ, ರೇಖಾ ಸೊರಟೂರ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ, ಅಡುಗೆ ಸಿಬ್ಬಂದಿಗಳಾದ ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ ಉಪಸ್ಥಿತರಿದ್ದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group