ಬೀದರ್; ಅಂತಾರಾಜ್ಯ ಪೊಲೀಸರಿಂದ ಮಹತ್ವದ ಸಭೆ

Must Read

ಬೀದರ– ರಾಜ್ಯದಲ್ಲಿ ಇಷ್ಟರಲ್ಲಿಯೇ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲು ಬೀದರ್ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ದ ಲಾತೂರ್, ನಾಂದೆಡ ಜಿಲ್ಲೆ ಹಾಗೂ ತೆಲಂಗಾಣ ಸಂಗಾರೆಡ್ಡಿ ಜಿಲ್ಲಾ ಪೊಲೀಸರಿಂದ ಮಹತ್ವದ ಸಭೆ ನಡೆಯಿತು.

ಬೀದರ್ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ  ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಪೊಲೀಸರು ಅಲ್ಲದೆ ಅಂತಾರಾಜ್ಯ ಪೊಲೀಸರ ಜೊತೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.

ಚುನಾವಣೆಯ ಸಮಯದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆಯ ವಹಿಸುವುದು, ಗಡಿ ಜಿಲ್ಲೆಯಾಗಿರುವುದರಿಂದ ಬೀದರ ಜಿಲ್ಲೆಯು ಒಂದಲ್ಲಾ ಒಂದು ರೀತಿಯಲ್ಲಿ ವ್ಯಾಪಾರ ವಹಿವಾಟು ಮತ್ತು ಅರ್ಥಿಕ ಚಟುವಟಿಕೆಯನ್ನು ಅವಲಂಬಿಸಿರುವ ಜಿಲ್ಲೆಯಾಗಿದೆ. ಹೀಗಾಗಿ ಜಿಲ್ಲೆಯಲ್ಲಿ 30 ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಿಲ್ಲ ಹಾಗೇನಾದರೂ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೀದರ್ ಜಿಲ್ಲಾದ್ಯಾಂತ ಪುಡಿ ರೌಡಿ ಗಳಿಗೆ  ವರಿಷ್ಠಾಧಿಕಾರಿಗಳು ಎಚ್ಚರಿಕೆ ನೀಡಿದರು.

ಸಭೆಯ ಬಗ್ಗೆ ಮಾಹಿತಿ ನೀಡಿದ ವರಿಷ್ಠಾಧಿಕಾರಿ ಚನ್ನ ಬಸವಣ್ಣ ಅವರು, ಈಗಾಗಲೇ ಬೀದರ್ ಜಿಲ್ಲೆಯಿಂದ ಇಬ್ಬರು ರೌಡಿ ಗಳನ್ನು  ಗಡಿ ಪಾರು ಮಾಡಲಾಗಿದೆ ಎಂದು ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group