ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ

Must Read

ಮೂಡಲಗಿ: ಬರಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಮೂಡಲಗಿ ದಿವಾಣಿ ಹಾಗೂ ಜೆಎಮ್ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ವೀಕ್ಷಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೊಂಡ ಮಾತನಾಡಿ, ವಿದ್ಯುನ್ಮಾನ ಮತಯಂತ್ರ ಕುರಿತಂತೆ ಮತದಾರರಲ್ಲಿ ಇರುವ ಗೊಂದಲಗಳ ಪರಿಹಾರಕ್ಕಾಗಿ ಹಾಗೂ ಮಾದರಿ ಮತದಾನ ವಿವರಿಸುವ ಈ ಪ್ರಾತ್ಯಕ್ಷಿಕೆಯ ಪ್ರಯೋಜನವನ್ನು ಎಲ್ಲ ಮತದಾರರು ಪಡೆದುಕೊಂಡು ಇತರರಿಗೂ ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ತಿಳಿಸಿದರು.

ಚುನಾವಣೆ ನೀತಿ ಸಂಹಿತೆ ಜಾರಿಯಾಗುವವರೆಗೂ ಅರಭಾವಿ ಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು. 

ಈ ಸಮಯದಲ್ಲಿ ಅರಭಾವಿ ಮತಕ್ಷೇತ್ರದ ಸೆಕ್ಟರ ಅಧಿಕಾರಿಗಳಾದ ಬಿಇಒ ಅಜಿತ ಮನ್ನಿಕೇರಿ, ತಾ.ಪಂ ಇಒ ಎಫ್.ಜಿ.ಚಿನ್ನನವರ, ಸಿಡಿಪಿ ಯಲ್ಲಪ್ಪ ಗದಾಡಿ ಮತ್ತು ತಾಲೂಕಾ ಶಿರಸ್ತೆದಾರ  ಪರಸಪ್ಪ ನಾಯಿಕ, ಚುನಾವಣಾ ವಿಷಯ ನಿರ್ವಾಹಕ ಪಿ.ಎಸ್.ಕುಂಬಾರ  ಹಾಗೂ ಗೋಪಾಲ ಭಸ್ಮೆ ಮತ್ತಿತರರು ಇದ್ದರು.

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...

More Articles Like This

error: Content is protected !!
Join WhatsApp Group