ಸೀರೆ ಹಂಚಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

Must Read

ದಾಳಿ ಮಾಡಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು

ಬೀದರ: ಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ ಪ್ರತಿಭಟನೆ ನಡೆಸಿದರು.

ಭಾಲ್ಕಿ ಪಟ್ಟಣದಲ್ಲಿ ಸೀರೆ ಹಂಚುತ್ತಿದ್ದ ಈಶ್ವರ ಖಂಡ್ರೆ ಕಾರ್ಯಕರ್ತರು. ಈ ವೇಳೆ ದಾಳಿ ನಡೆಸಿದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಿ.ಕೆ.ಸಿದ್ರಾಮ ಮತ್ತು ಕಾರ್ಯಕರ್ತರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಸೀರೆ ಹಂಚಲು ತಂದಿದ್ದ ವಾಹನಗಳನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು. ಕೆಲವು ಕಾಲ ಉದ್ವಿಘ್ನ ಪರಿಸ್ಥಿತಿ ಉಂಟಾಯಿತು.

ಘಟನೆ ಸಂಬಂಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ದಿ.ಭೀಮಣ್ಣ ಖಂಡ್ರೆಯವರ ಹೆಸರಿಗೆ ಮಸಿ ಬಳಿಯುತ್ತಿರುವ ಈಶ್ವರ ಖಂಡ್ರೆಗೆ ಧಿಕ್ಕಾರ ಎಂದು ಘೋಷಣೆ ಕೂಗಿದ ಕಾರ್ಯಕರ್ತರು ನಹಿ ಚಲೇಗಿ ಗೂಂಡಾಗರ್ದಿ ನಹಿ ಚಲೇಗಿ ಎಂದು ಘೋಷಣೆ ಹಾಕುತ್ತ ಪಾದಯಾತ್ರೆ ಮಾಡಿದರು.

ಸೀರೆ ಹಂಚುತ್ತಿರುವ ಈಶ್ವರ ಖಂಡ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group